ಸಕಲೇಶಪುರ:_ ಹಲಸುಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಿರಿಯ ಸೆಸ್ಕಂ ಇಂಜಿನಿಯರ್ ಮತ್ತು ಲೈನ್ ಮ್ಯಾನ್ ನಿರ್ಲಕ್ಷ್ಯದಿಂದ ಸಮರ್ಪಕ ವಿದ್ಯುತ್ ದೊರಕದೆ ಪರದಾಡುವಂತೆ ಆಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ ಎರಡು ವರ್ಷಕ್ಕೂ ಹೆಚ್ಚು ಸಮಯದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ವಿದ್ಯುತ್ ದೊರಕದೆ ಹಲವು ಕೆಲಸ ಕಾರ್ಯಗಳಿಗೆ ತೊಂದರೆಯಾಗಿದ್ದು, ಈ ಬಗ್ಗೆ ಸಂಬಂಧ ಪಟ್ಟವರಿಗೆ ಹಲವುಬಾರಿ ದೂರು ನೀಡಿದರು ಯಾವುದೇ ಪ್ರಯೊಜನವಾಗಲಿಲ್ಲ ಗ್ರಾಮದ ವ್ಯಾಪ್ತಿಯಲ್ಲಿ ಸಂಜೆ ೫ ಗಂಟೆಯ ನಂತರ ಇಲ್ಲಿ ಯಾವುದೇ ಗೃಹಪಯೋಗಿ ಟಿವಿ, ಮಿಕ್ಸಿ ಮುಂತಾದ ವಸ್ತುಗಳು ಬಳಕೆಯಾಗುವುದಿಲ್ಲ ಕೃಷಿ ಹಾಗು ಕುಡಿಯುವ ನೀರಿಗಾಗಿ ೫ಹೆಚ್ ಪಿ ಮೋಟರ್ ಪ್ರತಿ ಮನೆಯಲ್ಲೂ ಅಳವಡಿಸಲಾಗಿದ್ದು ಅದಕ್ಕೆ ವಿದ್ಯುತ್ ಕೊರತೆಯಿಂದ ಯಾವುದೇ ಕೆಲಸಗಳು ಸಂಪೂರ್ಣವಾಗಿ ಆಗುತ್ತಿಲ್ಲ ಎಂದು ಹೇಳಿದ್ದಾರೆ ಸಂಬಂಧಪಟ್ಟ ಅದಿಕಾರಿಗಳು ಈ ಬಗ್ಗೆ ಗಮನ ಹರಿಸಿ ಗ್ರಾಮಕ್ಕೆ ಭೇಟಿನೀಡಿ ಸಮಸ್ಯೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.