ಚಿತ್ರ ಕೃಪೆ: ANI
ಶ್ರೀನಗರ (www.vknews.in) : ಜಮ್ಮು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ 11 ಜಿಲ್ಲೆಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಒಟ್ಟು 4 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ – ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸಿವೆ. 13 ವರ್ಷಗಳ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು 11 ಗಂಟೆಯ ಹೊತ್ತಿಗೆ ಅನಂತನಾಗ್ – 5%, ಬುದ್ಗಾಂ -3%, ಬಂಡಿಪೊರಾ – 2%, ಬಾರಾಮುಲ್ಲಾ – 3%, ಜಮ್ಮು- 34%, ಕಾರ್ಗಿಲ್ – 33%, ಕುಪ್ವಾರಾ – 18%, ಲೇಹ್ – 26%, ಪೂಂಛ್ – 47%, ರಾಜೌರಿ – 55%, ಶ್ರೀನಗರದಲ್ಲಿ 3.50%ರಷ್ಟು ಮತದಾನವಾಗಿದೆ.
ರಾಜೌರಿ, ಗೋರಖ್ನಗರ್, ಜಮ್ಮು ಜಿಲ್ಲೆಯ ಗಾಂಧಿ ನಗರ್ ಮೊದಲಾದ ಪ್ರದೇಶಗಳಲ್ಲಿ ಜನ ಸರದಿ ಸಾಲಿನಲ್ಲಿ ನಿಂತು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ದೃಶ್ಯ ಕಂಡು ಬಂತು. ಕಾಶ್ಮೀರ ಕಣಿವೆಯಲ್ಲಿ ನಡೆಯುತ್ತಿರುವ ಚುನಾವಣೆ ವೇಳೆ ಅಹಿತಕರ ಘಟನೆಗಳು ತಡೆಯದಂತೆ ನಿಗಾವಹಿಸಲು 2ಜಿ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಚುನಾವಣೆ ನಡೆಯುವ ವಾರ್ಡ್ಗಳಲ್ಲಿ ಬಿಗಿ ಭದ್ರತೆಗೆ ವ್ಯವಸ್ಥೆ ಕೈಗೊಳ್ಳಲಾಗಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮತ್ತು ವಿಧಾನಸಭೆಯ ಮಾಜಿ ಉಪಾಧ್ಯಕ್ಷ ಕವೀಂದರ್ ಗುಪ್ತಾ ಜಮ್ಮುವಿನಲ್ಲಿ ಮತ ಚಲಾಯಿಸಿದರು.
ಇಂದು ಅನಂತನಾಗ್ನ 4, ಬುದ್ಗಾಂನ 1, ಬಂಡಪೊರಾದ 16, ಬಾರಾಮುಲ್ಲಾದ 15, ಜಮ್ಮುವಿನ 153, ಕಾರ್ಗಿಲ್ನ 13, ಕುಪ್ವಾರಾದ 18, ಲೇಹ್ನ 13, ಪೂಂಛ್ನ 26, ರಾಜೌರಿಯ 59 ಮತ್ತು ಶ್ರೀನಗರದ 3 ವಾರ್ಡ್ಗಳಲ್ಲಿ ಚುನಾವನೆ ನಡೆಯುತ್ತಿದೆ. ಒಟ್ಟು 11 ಜಿಲ್ಲೆಗಳ 1,145 ವಾರ್ಡ್ಗಳ ಪೈಕಿ ಇಂದು 422 ವಾರ್ಡ್ಗಲ್ಲಿ ಚುನಾವಣೆ ನಡೆಯುತ್ತಿದೆ. ಈ ನಡುವೆ ಬಂಡಿಪೊರಾ ಬೂತ್ನಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಬಿಜೆಪಿ ಅಭ್ಯರ್ಥಿ ಗಾಯಗೊಂಡಿದ್ದಾರೆ.
– ಪ್ರದೀಪ್ ಮಾಲ್ಗುಡಿ, ಸುದ್ದಿ ಟಿವಿ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.