ಶ್ರೀನಿವಾಸಪುರ (ವಿಶ್ವ ಕನ್ನಡಿಗ ನ್ಯೂಸ್ ) : ಸ್ವಚ್ಛ ಭಾರತ ನಿರ್ಮಿಸಲು ಎಲ್ಲರೂ ಸಹಕರಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಮಹಮದ್ ರೋಷನ್ ಷಾ ಹೇಳಿದರು. ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ವತಿಯಿಂದ ಬುಧವಾರ ಏರ್ಪಡಿಸಿದ್ದ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ದೇಶದ ಅಭಿವೃದ್ಧಿಗೆ ಸ್ವಚ್ಛ ವಾತಾವರಣ ಅತ್ಯಗತ್ಯ. ಪರಿಸರ ಮಾಲೀನ್ಯ ಹೆಚ್ಚಿದರೆ ಸಮಾಜಿಕ ವಾತಾವರಣ ಕೆಡುತ್ತದೆ ಎಂದು ಹೇಳಿದರು.
ಉತ್ತಮ ಆರೋಗ್ಯ ಹಾಗೂ ಸ್ವಚ್ಛತೆಗೆ ಅವಿನಾಭಾವ ಸಂಬಂಧ ಇದೆ. ಜನರು ಸ್ವಚ್ಛತೆಯ ಕೊರತೆ ಸಮಸ್ಯೆಗಳ ಮೂಲ ಎಂಬುದನ್ನು ಮನಗಾಣಬೇಕು. ಪ್ಲಾಸ್ಟಿಕ್ ಪರಿಸರ ಮಾಲೀನ್ಯ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅದು ಭೂಮಿಯನ್ನು ಕೆಡಿಸುವುದರ ಜೊತೆಗೆ, ಜಲ ಮೂಲಗಳನ್ನೂ ಕೆಡಿಸುತ್ತದೆ. ಜನರು ಪ್ಲಾಸ್ಟಿಕ್ ಕವರ್ ಬದಲು ಕೈ ಚೀಲ ಬಳಸುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಎನ್.ವಿ.ಜಯರಾಮೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶದ ಜನರು ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರ ಮಾಡುತ್ತದೆ ಎಂದು ಕಾಯದೆ, ಶ್ರಮದಾನದ ಮೂಲಕ ಗ್ರಾಮದ ಸ್ವಚ್ಛತೆ ಕಾಪಾಡಬೇಕು. ಶೌಚಾಲಯವನ್ನು ಕಡ್ಡಾಯವಾಗಿ ಬಳಸಬೇಕು. ಆ ಮೂಲಕ ಅನಾರೋಗ್ಯ ಪರಿಸರ ನಿರ್ಮಾನವಾಗುವುದನ್ನು ತಡೆಯಬೇಕು ಎಂದು ಹೇಳಿದರು.
ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರು ವೈಯಕ್ತಿಕ ಸ್ವಚ್ಛತೆಗೆ ಗಮನ ನೀಡಿದರೆ ಸಾಲದು, ಪರಿಸರ ಸ್ವಚ್ಛತೆಗೆ ಹೆಚ್ಚಿನ ಗಮನ ಕೊಡಬೇಕು. ಸರ್ಕಾರ ಸ್ವಚ್ಛತೆ ಕಾಪಾಡಲು ಸಾಕಷ್ಟು ಹಣ ವ್ಯಯಿಸುತ್ತಿದ್ದೆ ಆದರೆ ನಿರೀಕ್ಷಿತ ಸಾಧನೆ ಸಾಧ್ಯವಾಗುತ್ತಿಲ್ಲ ಎಂದು ಅಭಿಪ್ರಾಯಪಟ್ಟರು.
ವಿದ್ಯಾವಂತ ಸಮುದಾಯ ಸ್ವಚ್ಛತೆ ಮಹತ್ವ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಸಾಂಕ್ರಾಮಿಕ ರೋಗಗಳನ್ನು ತಡೆಯಲು ಸಹಕರಿಸಬೇಕು. ಆರೋಗ್ಯವಂತ ಸಮಾಜದಿಂದ ದೇಶದ ಪ್ರಗತಿಯ ವೇಗ ಹೆಚ್ಚುತ್ತದೆ. ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಜಾಣತನ ಎಂದು ಹೇಳಿದರು.ವಕೀಲ ಕೆ.ಆರ್.ಮುರಳಿಧರ್ ಸ್ವಚ್ಛತೆ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ನ್ಯಾಯಾಲಯದ ಆವರಣವನ್ನು ಸಾಂಘಿಕವಾಗಿ ಸ್ವಚ್ಛಗೊಳಿಸಲಾಯಿತು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್, ವಕೀಲರ ಸಂಘದ ಕಾರ್ಯದರ್ಶಿ ಕೆ.ಶ್ರೀನಿವಾಸಶೆಟ್ಟಿ, ಮಾಜಿ ಅಧ್ಯಕ್ಷರಾದ ಟಿ.ವೆಂಕಟೇಶ್, ಪಿ.ಸಿ.ನಾರಾಯಣಸ್ವಾಮಿ, ವಕೀಲರಾದ ವೆಂಕಟರವಣಪ್ಪ, ನಾಗರಾಜ್, ರೂಪಾ, ಸೌಭಾಗ್ಯ, ಎಂ.ನಾಗರಾಜ್, ಮುರಳಿ ಇದ್ದರು. ಶ್ರೀನಿವಾಸಪುರ ತಾಲ್ಲೂಕಿನ ಆಲವಟ್ಟ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಚೌಡರೆಡ್ಡಿ ಅವಿರೋಧ ಆಯ್ಕೆಯಾಗಿದ್ದಾರೆ.
ಶ್ರೀನಿವಾಸಪುರ: ತಾಲ್ಲೂಕಿನ ಆಲವಟ್ಟ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಚೌಡರೆಡ್ಡಿ ಅವಿರೋಧ ಆಯ್ಕೆಯಾಗಿದ್ದಾರೆ.‘ಸಹಕಾರ ಸಂಘದ ಕಚೇರಿ ಸಭಾಂಗಣದಲ್ಲಿ ಬುಧವಾರ ಅಧ್ಯಕ್ಷರ ಚುನಾವಣೆ ನಡೆಸಲು ಸಿದ್ಧತೆ ಮಾಡಲಾಗಿತ್ತು. ಆದರೆ ವಿರೋಧವಾಗಿ ಯಾರೂ ನಾಪತ್ರ ಸಲ್ಲಿಸದ ಪರಿಣಾಮವಾಗಿ, ಚೌಡರೆಡ್ಡಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು’ ಎಂದು ಚುನಾವಣಾಧಿಕಾರಿ ಟಿ.ಕಲಾಶಂಕರ್ ತಿಳಿಸಿದರು.
ಆಯ್ಕೆ ಬಳಿಕ ಚೌಡರೆಡ್ಡಿ ಸಹಕಾರ ಸಂಘದ ಸದಸ್ಯರನ್ನು ಉದ್ದೇಶಿಸಿ ಮಾನಾಡಿ ಸಂಘದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದರು. ತಮ್ಮನ್ನು ಅವಿರೋಧ ಆಯ್ಕೆ ಮಾಡಿದ ಸದಸ್ಯರಿಗೆ ಕೃತಜ್ಞತೆ ಅರ್ಪಿಸಿದರು. ಮುಖಂಡ ಮಂಜುನಾಥರೆಡ್ಡಿ ಮಾತನಾಡಿ, ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ಸಾಧನೆಯ ಹಾದಿಯಲ್ಲಿ ಸಾಗಿದೆ. ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಹಾಲು ಉತ್ಪಾದರು ಉತ್ತಮ ಗುಣಮಟ್ಟದ ಹಾಲು ನೀಡುವುದರ ಮೂಲಕ ಸಹಕಾರದ ಸಂಘದ ಘನತೆಯನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್.ಶ್ರೀರಾಮರೆಡ್ಡಿ, ಸಂಘದ ಸದಸ್ಯರಾದ ವಿ.ವೆಂಕಟರೆಡ್ಡಿ, ರಾಮಚಂದ್ರ, ಟಿ.ಮಂಜುನಾಥ್, ಡಿ.ನಾರಾಯಣಸ್ವಾಮಿ, ವಿ.ನಾರಾಯಣಸ್ವಾಮಿ, ಎಂ.ಶ್ರೀರಾಮರೆಡ್ಡಿ, ಮುನಿಕೃಷ್ಣಪ್ಪ, ಶ್ರೀನಿವಾಸ್, ಎಲ್.ಶಿವಣ್ಣ, ನಾಗವೇಣಿ, ವೆಂಕಟಲಕ್ಷ್ಮಮ್ಮ, ಎಂ.ಲಕ್ಷ್ಮಿ, ಕಾರ್ಯದರ್ಶಿ ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಅಶ್ವತ್ಥರೆಡ್ಡಿ ಇದ್ದರು.
ಶ್ರೀನಿವಾಸಪುರ: ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ 2019 – 20ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು, 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಫೆ.10 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಪ್ರವೇಶ ಪರೀಕ್ಷೆ ಬರೆಯಬಹುದಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕ ಸುಬ್ರಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕಾ ಪ್ರತಿನಿಧಿ, ವಿಕೆ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.