ಉಡುಪಿ, (ವಿಶ್ವ ಕನ್ನಡಿಗ ನ್ಯೂಸ್ ): ಜಿಲ್ಲೆಯಲ್ಲಿ ಹಿರಿಯ ನಾಗರೀಕರ ಗುರುತಿನ ಚೀಟಿ ನೀಡುವ ಕುರಿತಂತೆ ಸರಕಾರ ನಿಗಧಿಪಡಿಸಿರುವ ದರ ಹೊರತುಪಡಿಸಿ ಹೆಚ್ಚಿನ ದರ ವಸೂಲಿ ಮಾಡಿದ್ದಲ್ಲಿ ಸಂಬಂದಪಟ್ಟವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಎಚ್ಚರಿಕೆ ನೀಡಿದ್ದಾರೆ. ಅವರು ಶುಕ್ರವಾರ, ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲ ಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಉಡುಪಿ ಜಿಲ್ಲೆ, ವತಿಯಿಂದ ಪಾಲಕರ, ಪೋಷಕರ ಸಂರಕ್ಷಣೆ ಮತ್ತು ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯಡಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಹಾಗೂ ವಿವಿಧ ಇಲಾಖೆಗಳಲ್ಲಿ ಹಿರಿಯ ನಾಗರೀಕರಿಗಾಗಿ ಇರುವ ಯೋಜನೆಗಳು ಮತ್ತು ಹಿರಿಯ ನಾಗರೀಕರ ಗುರುತು ಚೀಟಿಯನ್ನು ಆನ್ಲೈನ್ ಮೂಲಕ ಪಡೆಯುವ ವಿಧಾನದ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹಿರಿಯ ನಾಗರೀಕರಿಗೆ ಸೇವಾ ಸಿಂಧು ಯೋಜನೆಯಲ್ಲಿ ಆನ್ಲೈನ್ ಮೂಲಕ ಗುರುತಿನ ಚೀಟಿ ವಿತರಿಸಲಾಗುತ್ತಿದ್ದು, ಸೇವಾ ಸಿಂಧು ಸೇವೆಗಳ ಸೌಲಭ್ಯ ಒದಗಿಸುತ್ತಿರುವ ಪ್ರಾಂಚೈಸಿಗಳು, ಸರಕಾರ ನಿಗಧಿಪಡಿಸಿರುವ ದರಕ್ಕಿಂತ ಹೆಚ್ಚಿನ ದರ ಪಡೆಯುತ್ತಿರುವ ಬಗ್ಗೆ, ಸಭೆಯಲ್ಲಿದ್ದ ಹಿರಿಯ ನಾಗರೀಕರು ದೂರು ನೀಡಿದ ಹಿನ್ನಲೆಯಲ್ಲಿ, ಹೆಚ್ಚಿನ ದರ ಪಡೆಯುತ್ತಿರುವವರ ವಿರುದ್ದ ಸಾಕ್ಷ್ಯಾಧಾರ ನೀಡಿದ್ದಲ್ಲಿ ಅಂತಹ ಪ್ರಾಂಚೈಸಿಗಳ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವುದಲ್ಲದೇ, ಪ್ರಾಂಚೈಸಿ ರದ್ದುಗೊಳಿಸಲು ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು. ಜಿಲ್ಲೆಯಲ್ಲಿ ಹಿರಿಯ ನಾಗರೀಕರ ಹಗಲು ಯೋಗಕ್ಷೆಮ ಕೇಂದ್ರ ಆರಂಭಿಸುವ ಬಗ್ಗೆ, ಹಿರಿಯ ನ್ಯಾಯ ಮಂಡಳಿಯಲ್ಲಿರುವ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸುವ ಬಗ್ಗೆ, ಉಡುಪಿಯಲ್ಲಿರುವ ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರವನ್ನು ಉಡುಪಿ ಪೊಲೀಸ್ ಅಧೀಕ್ಷಕರ ಕಚೇರಿಗೆ ಸ್ಥಳಾಂತರಿಸುವ ಬಗ್ಗೆ,ಜಿಲ್ಲಾ ಮಟ್ಟದ ಹಿರಿಯ ನಾಗರೀಕರ ಸಮಿತಿಗೆ ಸದಸ್ಯರನ್ನು ನೇಮಕ ಮಾಡುವ ಬಗ್ಗೆ ಚರ್ಚೆ ನಡೆಯಿತು.ಎಲ್ಲಾ ಇಲಾಖೆಗಳಲ್ಲಿ ಹಿರಿಯ ನಾಗರೀಕರಿಗೆ ಆದ್ಯತೆ ಮೇಲೆ ಶೀಘ್ರದಲ್ಲಿ ಅವರ ಕೆಲಸಗಳನ್ನು ಮಾಡಿಕೊಡುವಂತೆ ಸೂಚಿಸಿದ ವಿದ್ಯಾಕುಮಾರಿ, ಬಸ್ಗಳಲ್ಲಿ ಹಿರಿಯ ನಾಗರೀಕರಿಗೆ ಮೀಸಲಾದ ಸೀಟುಗಳನ್ನು ಕಡ್ಡಾಯವಾಗಿ ಅವರಿಗೆ ಬಿಟ್ಟು ಕೊಡುವ ಬಗ್ಗೆ ಎಲ್ಲಾ ಖಾಸಗಿ ಬಸ್ ಮಾಲೀಕರಿಗೆ ಹಾಗೂ ಕೆ.ಎಸ್.ಆರ್.ಟಿ.ಸಿ ಗೆ ಸೂಚಿಸುವಂತೆ ಆರ್.ಟಿ.ಓ ಗೆ ವಿದ್ಯಾಕುಮಾರಿ ತಿಳಿಸಿದರು.ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಯೋಗಕ್ಷೇಮ ಪ್ರಾಧಿಕಾರಿ ಹಾಗೂ ಕುಂದಾಪುರ ಉಪ ವಿಭಾಗಾಧಿಕಾರಿ ಮಧುಕೇಶ್ವರ್, ಹಿರಿಯ ನಾಗರೀಕರ ಆಸ್ತಿಯನ್ನು ಲಪಟಾಯಿಸುವವರಿಂದ ಮರಳಿ ಆಸ್ತಿಯನ್ನು ದೊರಕಿಸಿಕೊಡುವ ಬಗ್ಗೆ ಮತ್ತು ಖಾತೆಯನ್ನು ಬದಲಾಯಿಸಿದ್ದರೆ ಅದನ್ನು ರದ್ದುಗೊಳಿಸಿ ಪುನಃ ಹಿರಿಯ ನಾಗರೀಕರ ಹೆಸರಿಗೆ ಮಾಡುವ ಬಗ್ಗೆ ವಿವರಿಸಿದರು.ಆರೋಗ್ಯ ಇಲಾಖೆಯಲ್ಲಿ ಲಭ್ಯವಿರುವ ಸೇವೆಗಳ ಬಗ್ಗೆ ಜಿಲ್ಲಾ ಸವೇಕ್ಷಣಾಧಿಕಾರಿ ಡಾ. ವಾಸುದೇವ್ ಮಾಹಿತಿ ನೀಡಿದರು.ಕಂದಾಯ ಇಲಾಖೆಯಲ್ಲಿ ಲಭ್ಯವಿರುವ ಸೇವೆಗಳ ಬಗ್ಗೆ ಜಿಲ್ಲಾ ಅಂಕಿ ಅಂಶ ಸಂಗ್ರಹಣಾಧಿಕಾರಿ ನಾಗರಾಜ ರಾವ್ ವಿವರಿಸಿದರು.ಹಿರಿಯ ನಾಗರೀಕರು ಮನೆಯಲ್ಲಿಯೇ ಕುಳಿತು ಸೇವಾ ಸಿಂಧು ಯೋಜನೆಯ ಮೂಲಕ ಗುರುತು ಚೀಟಿ ಪಡೆಯುವ ಕುರಿತಂತೆ ಪ್ರಮೋದ್ ವಿವರಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಉಪಸ್ಥಿತರಿದ್ದರು.ವಿಕಲ ಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಅಧಿಕಾರಿ ನಿರಂಜನ ಭಟ್ ಸ್ವಾಗತಿಸಿ, ವಂದಿಸಿದರು. -ವಾ .ಭ .ಉ
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.