ಗುಡಿಬಂಡೆ: ವಿದ್ಯಾರ್ಥಿಗಳಲ್ಲಿ ಒಂದಲ್ಲ ಒಂದು ರೀತಿಯ ಪ್ರತಿಭೆಯಿದ್ದು, ಅದರ ಅನಾವರಣಕ್ಕೆ ವಸ್ತು ಪ್ರದರ್ಶನದಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಸಾಯಿ ವಿದ್ಯಾನೀಕೇತನ ಶಾಲೆಯ ಮುಖ್ಯಸ್ಥ ಡಿ.ರಾಮಾಂಜಿನೇಯ ತಿಳಿಸಿದರು.
ಪಟ್ಟಣದ ಶ್ರೀ ಸಾಯಿ ವಿದ್ಯಾನೀಕೇತನ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ ಎನ್ನಲಾಗುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕರಾಭ್ಯಾಸ ಇದ್ದರೆ ಸಾಲದು ಅದರ ಜೊತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕವಾಗುತ್ತದೆ. ಈ ನಿಟ್ಟಿನಲ್ಲಿ ಇಂತಹ ವಸ್ತು ಪ್ರದರ್ಶನ ಮಕ್ಕಳ ಶೈಕಣಿಕ ಬೆಳವಣಿಗೆಗೆ ಪೂರಕವಾಗುತ್ತದೆ. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರಬೇಕು. ಇದಕ್ಕೆ ಪೋಷಕರು ಹಾಗೂ ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಹುಡುಕಿ ಆ ಪ್ರತಿಭೆಯ ಕಡೆಗೆ ಹೆಚ್ಚು ಗಮನ ವಹಿಸಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದಾಗ ಆ ಮಗು ಉನ್ನತ ಮಟ್ಟಕ್ಕೆ ಹೋಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ನಂತರ ಪಟ್ಟಣ ಪಂಚಾಯತಿ ಅಧ್ಯಕ್ಷ ದ್ವಾರಕನಾಥನಾಯ್ಡು ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪುಸ್ತಕದ ಹುಳುಗಳಾದರೇ ಯಾವುದೇ ಪ್ರಯೋಜನವಿಲ್ಲ. ತಾವು ತಮ್ಮ ಜ್ಞಾನಕ್ಕೆ ಚುರುಕು ಮುಟ್ಟಿಸಿ ಪೋಷಕರು ಹಾಗೂ ಶಿಕ್ಷಕರ ಸಹಾಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಕೂಡ ಪರಿಣಿತಿ ಪಡೆಯುಬೇಕು. ವಿಜ್ಞಾನ ಮಾದರಿಗಳ ತಯಾರಿಕೆ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹೆಚ್ಚಿಸುವ ಜತೆಗೆ ಕಲಿಕೆಯಲ್ಲಿ ಆಸಕ್ತಿ ಮೂಡುವಂತೆ ಮಾಡುವುದರ ಜೊತೆಗೆ ಚಿತ್ರಕಲೆ ಮಕ್ಕಳಲ್ಲಿ ಏಕಾಗ್ರತೆಯನ್ನು ಮೂಡಿಸುತ್ತದೆ. ಆದ್ದರಿಂದ ಇಂತಹ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಹಮ್ಮಿಕೊಂಡಾಗ ಮಕ್ಕಳಲ್ಲಿ ಶೈಕ್ಷಣಿಕ ಪ್ರಗತಿ ಕಾಣಹುದಾಗಿದೆ ಎಂದರು.
ವಸ್ತು ಪ್ರದರ್ಶನದಲ್ಲಿ ಐತಿಹಾಸಿಕ ಸ್ಮಾರಕಗಳು, ವಿಜ್ಞಾನ ಮಾದರಿಗಳು, ಹಳ್ಳಿಯ ಸೊಬಗು, ಮೊಳಕೆ ಕಾಳುಗಳ ಉಪಯೋಗ ಮತ್ತು ಪೌಷ್ಟಿಕತೆ, ಸೋಲಾರ್ ಮಾದರಿ, ನೀರಿನ ಮಿತಬಳಕೆ, ಪರಿಸರ ಮಾಲಿನ್ಯದ ದುಷ್ಪರಿಣಾಮಗಳು, ಪವನ ಶಕ್ತಿ, ದೇಹದ ವಿವಿಧ ಅಂಗಗಳ ರಚನೆ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿಜೇತರು, ಕೆಂಪು ಕೋಟೆ, ಕುತುಬ್ ಮಿನಾರ್ ಸೇರಿದಂತೆ ಸುಮಾರು ೨೦೦ ಮಾದರಿಗಳನ್ನು ತಯಾರಿಸಲಾಗಿತ್ತು ಹಾಗೂ ವಿದ್ಯಾರ್ಥಿಗಳು ತಯಾರಿಸಿದ್ದಂತಹ ಮಾದರಿಗಳ ಬಗ್ಗೆ ವಿದ್ಯಾರ್ಥಿಗಳು ವೀಕ್ಷಕರಿಗೆ ಸಂಪೂರ್ಣವಾಗಿ ವಿವರಿಸಲಾಗುತ್ತಿತ್ತು.
ಈ ವೇಳೆ ವಿಜ್ಞಾನ ಶಿಕ್ಷಕರಾದ ಕೆ.ಸಿ.ಮಂಜುನಾಥ್, ಸಾಯಿ ವಿದ್ಯಾನೀಕೇತನ ಶಾಲೆಯ ಮುಖ್ಯ ಶಿಕ್ಷಕಿ ಗೀತಾ, ಶಿಕ್ಷಕರಾದ ಪಾರ್ವತಿ, ರಾಧ, ತಾಸೀನಾ, ಶ್ರೀಮತಿ, ರಬಿಯಾ, ಸುಧಾ, ಸರಿತಾ, ಶಿಲ್ಪ, ಉಮಾ, ತ್ರಿವೇಣಿ, ವೀಣಾ, ಪಲ್ಲವಿ ಸೇರಿದಂತೆ ಹಲವರು ಇದ್ದರು.
Balaji, Gudibande
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.