ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್ ) : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ದ.ಕ. ಹಾಗೂ ಶಕ್ತಿನಗರದ ಶಕ್ತಿ ಪಿ.ಯು. ಕಾಲೇಜಿನ ಶಕ್ತಿ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಘದ ಸಂಯುಕ್ತ ಆಶ್ರಯದಲ್ಲಿ ದಿನಾಂಕ 17.3.2019ರ ಮಧ್ಯಾಹ್ನ 2.30ಕ್ಕೆ ಶಕ್ತಿ ಪಿ.ಯು. ಕಾಲೇಜಿನಲ್ಲಿ “ಅನುಭಾವ ಸಂಗಮ” ಚಿಂತನಗೋಷ್ಠಿಗಳು ನಡೆಯಲಿವೆ. ‘ವರ್ತಮಾನಕ್ಕೂ ವಚನ’ ಎಂಬ ಶೀರ್ಷಿಕೆಯಡಿಯಲ್ಲಿ ನಡೆಯುವ ಚಿಂತನಗೋಷ್ಠಿಗಳ ಉದ್ಘಾಟನೆಯನ್ನು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ನಡೆಸಲಿದ್ದಾರೆ.
ಶ್ರೀ ಜಗನ್ನಾಥಪ್ಪ ಪನಸಾಳೆ ಜನವಾಡಾ ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದು, ಪ್ರಾಚಾರ್ಯ ಪ್ರಭಾಕರ ಜಿ.ಎಸ್. ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಶ್ರೀ ಗೋಪಾಲ ಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ. ನಾೈಕ್ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ‘ವಚನಗಳು ಸಾರುವ ಸಾರ್ವಕಾಲಿಕ ಮೌಲ್ಯಗಳು’ ವಿಷಯದ ಕುರಿತಂತೆ ಶ್ರೀಮತಿ ಸಾವಿತ್ರಿ ರಮೇಶ್ ಭಟ್, ‘ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದ ವಚನಗಳು’ ಕುರಿತಂತೆ ಡಾ. ಎಸ್. ಪಿ ಗುರುದಾಸ್ ಚಿಂತನಗೋಷ್ಠಿಯಲ್ಲಿ ವಿಚಾರ ಮಂಡಿಸಲಿರುವರು. ಡಾ. ನಾಯಕ್ ರೂಪ್ಸಿಂಗ್ ಹಾಗೂ ಶ್ರೀಮತಿ ಸುಜಯ ಶೆಟ್ಟಿ ಗೋಷ್ಠಿಗಳ ಅಧ್ಯಕ್ಷತೆ ವಹಿಸಲಿರುವರು.
ಸಂಜೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಡಾ. ಮುರಳೀಧರ್ ನಾೈಕ್ ವಹಿಸಲಿದ್ದು ಶ್ರೀಮತಿ ವಿದ್ಯಾ ಕಾಮತ್ ಜಿ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಾರೆ. ಬೈಕಾಡಿ ಜನಾರ್ದನ ಆಚಾರ್ ಸಮಾರೋಪ ಭಾಷಣ ಮಾಡಲಿರುವರು. ಕಾರ್ಯಕ್ರಮದಲ್ಲಿ ಇಂಚರ ತಂಡ ಉರ್ವ ಇದರ ಸದಸ್ಯರು ವಚನ ಗಾಯನ ಪ್ರಸ್ತುತ ಪಡಿಸಲಿದ್ದಾರೆ.
ಪತ್ರಿಕಾ ಪ್ರತಿನಿಧಿ, ವಿಕೆ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.