ತುಮಕೂರು (ವಿಶ್ವ ಕನ್ನಡಿಗ ನ್ಯೂಸ್ ) : ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಪುರುಷನಿಗೆ ಸರಿಸಮನಾಗಿ ಮಹಿಳೆಯರು ಮುನ್ನಡೆ ಸಾಧಿಸುತ್ತಿದ್ದರೂ, ಮಹಿಳೆಯನ್ನು ಶೋಷಣೆ ಮಾಡುವ ಪ್ರವೃತ್ತಿ ಸಮಾಜದಲ್ಲಿ ಇನ್ನೂ ನಿವಾರಣೆಗೊಂಡಿಲ್ಲ. ಆದ್ದರಿಂದ ಮಹಿಳೆಯರು ಜಾಗೃತರಾಗಿ ಸ್ತ್ರೀಭ್ರೂಣ ಹತ್ಯೆ ಒಳಗೊಂಡಂತೆ ಎಲ್ಲ ರೀತಿಯ ಶೋಷಣೆಗಳ ವಿರುದ್ಧ ದನಿಯೆತ್ತಬೇಕು ಎಂದು ಸಾಹಿತಿ ಕವಿತಾಕೃಷ್ಣ ಹೇಳಿದರು. ಅವರು ತುಮಕೂರು ನಗರದ ನೃಪತುಂಗ ಬಡಾವಣೆಯ ನಿರ್ಭಯ ಮಹಿಳಾ ಜಾಗೃತಿ ವೇದಿಕೆ ವತಿಯಿಂದ ಮಾರ್ಚ್ 14 ರಂದು ಸಂಜೆ ಏರ್ಪಟ್ಟಿದ್ದ ಮಹಿಳಾ ದಿನಾಚರಣೆಯಲ್ಲಿ ಮುಖ್ಯಭಾಷಣ ಮಾಡುತ್ತಿದ್ದರು.
ಮಹಿಳಾ ದಿನಾಚರಣೆಯು ಕೇವಲ ಮಹಿಳೆಯರಿಗಷ್ಟೇ ಸೀಮಿತವಾಗಬಾರದು. ಪುರುಷರೂ ಸಂಭ್ರಮದಿಂದ ಆಚರಿಸುವಂತಾಗಬೇಕು. ಪುರುಷರೂ ಭಾಗಿಗಳಾಗಬೇಕು. ಆಗಲೇ ಇದು ಅರ್ಥಪೂರ್ಣವಾಗುತ್ತದೆ ಎಂದರು. ಮುಖ್ಯ ಅತಿಥಿಗಳಾಗಿದ್ದ ಸಾಹಿತಿ ಜಿ.ಕೆ.ಕುಲಕರ್ಣಿ ಮಾತನಾಡುತ್ತ, ಸ್ತ್ರೀಭ್ರ್ರೂಣ ಹತ್ಯೆಯಿಂದ ಇಂದು ಪುರುಷ ಮತ್ತು ಮಹಿಳೆಯ ಲಿಂಗಾನುಪಾತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದ್ದು, ಮಹಿಳೆಯರ ಸಂಖ್ಯೆಯು ಗಾಬರಿ ಮೂಡಿಸುವಷ್ಟು ಪ್ರಮಾಣದಲ್ಲಿ ಇಳಿಮುಖವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸುತ್ತ, ಮೊದಲಿಗೆ ಮಹಿಳೆಯರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಮಾಜದಲ್ಲಿ ಎಲ್ಲರಲ್ಲೂ ಅರಿವು ಮೂಡಿಸುವ ಕಾರ್ಯ ಮಾಡಬೇಕೆಂದು ಮನವಿ ಮಾಡಿಕೊಂಡರು.
ಮತ್ತೋರ್ವ ಮುಖ್ಯ ಅತಿಥಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಮಾತನಾಡಿ, ಮಹಿಳೆಯರು ಮನೆಗಳಲ್ಲಿ ಟಿವಿ ಧಾರಾವಾಹಿಗಳನ್ನು ವೀಕ್ಷಿಸುತ್ತ ಅದರಲ್ಲೇ ಮುಳುಗಿಹೋಗದೆ, ಇಂತಹ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಬೇಕು. ಆಗಲೇ ಶೋಷಣೆ ಹಾಗೂ ದೌರ್ಜನ್ಯಗಳ ವಿರುದ್ಧ ದನಿಯೆತ್ತಲು ಮಹಿಳೆಯರಿಗೆ ಶಕ್ತಿ ಬರುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ರಂಗೋಲೆ ಕಲೆಯ ಮೂಲಕ “ವಲ್ರ್ಡ್ ಬುಕ್ ಆಫ್ ರೆಕಾರ್ಡ್’’ನಲ್ಲಿ ದಾಖಲಾಗಿರುವ ಎನ್.ಎ.ಜಯ ಸೋಮು ಭಾಸ್ಕರಾಚಾರ್, ಸರಸ್ ಫೌಂಡೇಷನ್ ಕಾರ್ಯದರ್ಶಿ ಹಾಗೂ ಪತ್ರಕರ್ತ ಆರ್.ಎಸ್.ಅಯ್ಯರ್, “ಸಹಕಾರ ರತ್ನ” ಪ್ರಶಸ್ತಿ ಪುರಸ್ಕøತೆ ಅನ್ನಪೂರ್ಣ ವೆಂಕಟನಂಜಪ್ಪ, ವೃತ್ತಿನಿಷ್ಠೆಗಾಗಿ ಜಯನಗರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ಬಿ.ಮಹೇಶ್ ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯ ಅಧ್ಯಕ್ಷೆ ಗೀತಾ ನಾಗೇಶ್ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷೆ ಎನ್.ಸುಗುಣಾದೇವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯ ಪದಾಧಿಕಾರಿಗಳಾದ ಸಿ.ಎಲ್.ಸುನಂದಮ್ಮ, ಸಿ.ಎಚ್.ಉಷಾರಾಣಿ, ನಂದಿನಿ, ಪದ್ಮಾವತಿ, ಅನಿತಾ ಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.
ಪತ್ರಿಕಾ ಪ್ರತಿನಿಧಿ, ವಿಕೆ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.