ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದೆ ತಟಸ್ಥ ನಿಲುವು ಹೊಂದಿದ್ದ ಕ್ಷೇತ್ರದ ಮಾಜಿ ಶಾಸಕ ಎಂ.ರಾಜಣ್ಣ ಕೋಲಾರದಲ್ಲಿ ನಡೆದ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗವಹಿಸುವ ಮೂಲಕ ಅಚ್ಚರಿ ಮೂಡಿಸಿ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿದ್ದಾರೆ.
ಕಳೆದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಜೆ.ಡಿ.ಎಸ್ ಪಕ್ಷದಿಂದ ಬಿಫಾರಂ ವಂಚಿತರಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಪರೋಕ್ಷವಾಗಿ ಜೆ.ಡಿ.ಎಸ್ ಪಕ್ಷ ಅಧಿಕೃತ ಅಭ್ಯರ್ಥಿ ಮೇಲೂರು ರವಿಕುಮಾರ್ ಅವರ ಸೋಲಿಗೆ ಪರೋಕ್ಷವಾಗಿ ಕಾರಣಕರ್ತರಾದ ಮಾಜಿ ಶಾಸಕ ಎಂ.ರಾಜಣ್ಣ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಬೆಂಬಲಿಸಿದ್ದಾರೆ ಎಂದು ಚರ್ಚೆಗಳು ನಡೆದಿತ್ತು ಚುನಾವಣೆಯ ವೇಳೆಯಲ್ಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿಟಿ ರವಿ ಶಿಡ್ಲಘಟ್ಟಕ್ಕೆ ಭೇಟಿ ನೀಡಿ ಮಾಜಿ ಶಾಸಕ ಎಂ.ರಾಜಣ್ಣ ಅವರೊಂದಿಗೆ ಸಮಾಲೋಚನೆ ನಡೆಸಿ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿದರು.
ಅಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಶಾಸಕ ಎಂ.ರಾಜಣ್ಣ ಭಾಜಪ ಶಾಸಕ ಸಿಟಿ ರವಿ ತಮ್ಮ ಮನೆಗೆ ಕಾಫೀ ಸೇವಿಸಲು ಬಂದಿದ್ದರು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಭಾಜಪ ಅಭ್ಯರ್ಥಿಗೆ ಬೆಂಬಲಿಸಬೇಕೆಂದು ಕೋರಿದರು ಆದರೇ ತಮ್ಮ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದ್ದೇವೆಂದು ಸ್ಪಷ್ಟಪಡಿಸಿದರು ಆದರೇ ಇಂದು ಕೋಲಾರದಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಮಾಜಿ ಶಾಸಕ ರಾಜಣ್ಣ ಪ್ರತ್ಯಕ್ಷವಾಗಿ ಇವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆಯೇ? ಎಂಬ ಅನುಮಾನ ಮೂಡಿದರಲ್ಲದೆ ಲೋಕಸಭಾ ಚುನಾವಣೆಯಲ್ಲಿ ಗೌಪ್ಯವಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದರಾ? ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ವಿಧಾನಸಭೆಯ ಚುನಾವಣೆಯಲ್ಲಿ ಸೋತ ಬಳಿಕ ಹಾಲಿ ಶಾಸಕ ವಿ.ಮುನಿಯಪ್ಪ ಅವರೊಂದಿಗೆ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವೇದಿಕೆ ಹಂಚಿಕೊಂಡಿದ್ದ ಮಾಜಿ ಶಾಸಕ ಎಂ.ರಾಜಣ್ಣ ಕಾಂಗ್ರೇಸ್ ಸೇರ್ಪಡೆಯಾಗಲಿದ್ದಾರೆಯೇ? ಎಂಬ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗವಹಿಸಿ ಹಲವು ರೀತಿಯ ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದಾರೆ.
ಈ ಕುರಿತು ಮಾಜಿ ಶಾಸಕ ರಾಜಣ್ಣ ಅವರನ್ನು ಸಂಪರ್ಕಿಸಿದಾಗ ಮಾಜಿ ಶಾಸಕರಾದ ಕೊತ್ತೂರು ಮಂಜುನಾಥ್,ಮಂಜುನಾಥ್ಗೌಡ ಮತ್ತು ಸ್ನೇಹಿತರು ಕೋಲಾರಕ್ಕೆ ಬರುವಂತೆ ಆಹ್ವಾನಿಸಿದ್ದರಿಂದ ಇಂದು ಕೋಲಾರಕ್ಕೆ ಹೋಗಿದ್ದೇನೆ ಆದರೇ ಬಿಜೆಪಿ ಸೇರ್ಪಡೆಯಾಗಿಲ್ಲವೆಂದು ಸ್ಪಷ್ಟಪಡಿಸಿದರು.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.