ಭೀಕರ ಅಪಘಾತದ ದೃಶ್ಯಗಳು
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಬಳಿ ಶುಕ್ರವಾರ ಬುಲೆಟ್ ಟ್ಯಾಂಕರ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಭಟ್ಕಳ ಮೂಲದ ಒಂದೇ ಕುಟುಂಬಕ್ಕೆ ಸೇರಿದ ನಾಲ್ಕು ಮಂದಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ತಾಲೂಕಿನ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಅಪಘಾತದಿಂದ ಜೀವ ಕಳೆದುಕೊಂಡವರ ಮೃತದೇಹಗಳು
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಗಂಗಾವತಿ ಸಮೀಪದ ನಿವಾಸಿಗಳಾದ ಗೋವಿಂದ (64), ಅವರ ಪತ್ನಿ ಪದ್ಮಾವತಿ (43), ಪುತ್ರ ನಾಗರಾಜ (22) ಹಾಗೂ ಅಳಿಯ ಗಣೇಶ (28) ಎಂಬವರೇ ಮೃತಪಟ್ಟವರು. ಅಳಿಯ ಶಿವಾನಂದ, ಅವರ ಪತ್ನಿ ಜ್ಯೋತಿ, ಇವರ ಮಕ್ಕಳಾದ ಯಶ್ವಿನ್ ಹಾಗೂ ವರ್ಷಾ ಮತ್ತು ಗಣೇಶ್, ಯಮುನಾ ಎಂಬವರು ಗಾಯಗೊಂಡಿದ್ದು, ಕಾರು ಚಾಲಕ ರಮೇಶ್ ಕೂಡಾ ಅಪಾಯದಿಂದ ಪಾರಾಗಿದ್ದು, ಗಾಯಾಳುಗಳೆಲ್ಲರನ್ನು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಂಟ್ವಾಳ ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಗೊಂಡ ಮಗು
ಗೋವಿಂದ ಅವರ ಕುಟುಂಬ ವಿವಿಧ ಪವಿತ್ರ ಯಾತ್ರಾಸ್ಥಳಗಳ ಸಂದರ್ಶನಕ್ಕಾಗಿ ತಮ್ಮ ಟವೇರಾ ಕಾರಿನಲ್ಲಿ ಹೊರಟಿದ್ದು, ಕೊಲ್ಲೂರು, ಶೃಂಗೇರಿ, ಹೊರನಾಡು ಹಾಗೂ ಧರ್ಮಸ್ಥಳ ದೇವಸ್ಥಾನಗಳನ್ನು ಸಂದರ್ಶಿಸಿ ಗುರುವಾರ ರಾತ್ರಿ ಅಲ್ಲೇ ವಾಸ್ತವ್ಯ ಹೂಡಿದ್ದರು. ಶುಕ್ರವಾರ ಬೆಳಿಗ್ಗೆ ಅಲ್ಲಿಂದ ಹೊರಟ ಕುಟುಂಬ ಮಂಗಳೂರು ತೆರಳಿ ಬಿಚ್ ಮೊದಲಾದ ಪ್ರೇಕ್ಷಣೀಯ ಸ್ಥಳಗಳಿಗೆ ಕುಟುಂಬ ಸಮೇತ ತೆರಳಿ ಬಳಿಕ ಭಟ್ಕಳದತ್ತ ಪ್ರಯಾಣ ಬೆಳೆಸುವ ಯೋಚನೆಯಲ್ಲಿ ಹೊರಟಿದ್ದರು.
ಆದರೆ ಶುಕ್ರವಾರ ಮಧ್ಯಾಹ್ನ ಸುಮಾರು 1.15 ರ ವೇಳೆಗೆ ಇವರ ಕಾರು ಬ್ರಹ್ಮರಕೂಟ್ಲು ಬ್ರಹ್ಮ ಸನ್ನಿಧಿ ಬಳಿ ತಲುಪುತ್ತಲೇ ಎದುರಿನಿಂದ ಬಂದ ಯಮರೂಪಿ ಟ್ಯಾಂಕರ್ ನಾಲ್ಕು ಮಂದಿಯನ್ನು ಶಾಶ್ವತವಾಗಿ ಈ ಲೋಕದಿಂದ ವಿದಾಯ ಹೇಳುವಂತೆ ಮಾಡಿದೆ. ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಎಎಸ್ಪಿ ಸೈದುಲ್ ಅದಾವತ್, ವೃತ್ತ ನಿರೀಕ್ಷಕ ನಾಗರಾಜ್, ಟ್ರಾಫಿಕ್ ಎಸ್ಸೈ ಮಂಜುನಾಥ್, ಗ್ರಾಮಾಂತರ ಎಸ್ಸೈ ಪ್ರಸನ್ನ, ಅಪರಾಧ ವಿಭಾಗದ ಎಸ್ಸೈ ಸುಧಾಕರ ತೋನ್ಸೆ ಸಹಿತ ಸಂಚಾರಿ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ಕೆಲ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಸಕಾಲಿಕ ಕ್ರಮ ಕೈಗೊಂಡು ಹೆದ್ದಾರಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.