ಮುಂಬೈ ,(ವಿಶ್ವ ಕನ್ನಡಿಗ ನ್ಯೂಸ್ ): ಮುಂಬೈ ಬಂದ್ರಾದಲ್ಲಿನ ಮಹಾನಗರ ಟೆಲಿಫೋನ್ ನಿಗಮ್ ಲಿಮಿಟೆಡ್(ಎಂಟಿಎನ್ಎಲ್)ನ ಬಹುಮಹಡಿ ಕಟ್ಟಡದಲ್ಲಿ ಸೋಮವಾರ ಭಾರಿ ಆಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ 100ಕ್ಕೂ ಹೆಚ್ಚು ಜನ ಸಿಲುಕಿರುವ ಸಾಧ್ಯತೆ ಇದೆ.ಮಧ್ಯಾಹ್ನ 2.30ರ ಸುಮಾರಿಗೆ ಎಂಟಿಎನ್ ಎಲ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅವಘಡದಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ. ಅನೇಕ ಮಂದಿ ಕಟ್ಟಡದ ಟೆರೇಸ್ ಭಾಗಕ್ಕೆ ಬಂದಿದ್ದು, ಅಲ್ಲಿಂದ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ.ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಗಡ ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಅಗ್ನಿಶಾಮಕ ದಳ ಅಭಿಪ್ರಾಯಪಟ್ಟಿದೆ. ಒಂದು ರೋಬಾಟ್ ವಾಹನ ಮತ್ತು ಒಂದು ಆಂಬುಲೆನ್ಸ್ ಸೇರಿ ಒಟ್ಟು 14 ಅಗ್ನಿಶಾಮಕ ದಳದ ವಾಹನಗಳು ಮತ್ತಿತರ ಉಪಕರಣಗಳನ್ನು ಬಳಸಿ ಬೆಂಕಿನಂದಿಸಲು ಅಗ್ನಿಶಾಮಕ ದಳದ 175 ಸಿಬ್ಬಂದಿ ಶ್ರಮಿಸುತ್ತಿದ್ದಾರೆ.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.