ಫರಂಗಿಪೇಟೆ(www.vknews.in); ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಫರಂಗಿಪೇಟೆ ಆಸುಪಾಸಿನ ಕುಂಜತ್ಕಳ,ಪುಂಚಮೆ,ಅಮೆಮಾರ್ ಮತ್ತು ಕುಂಪನಮಜಲು ಪರಿಸರದ ತಗ್ಗು ಪ್ರದೇಶಗಳಲ್ಲಿ ನೀರಿನ ಹರಿವು ಜಾಸ್ತಿಯಾದ ಕಾರಣ ಸುಮಾರು 40 ರಷ್ಟು ಮನೆಗಳು ಜಲಾವೃತಗೊಂಡಿದ್ದವು ಈ ಸಂಧರ್ಭದಲ್ಲಿ ಸ್ಥಳೀಯ ನಿವಾಸಿಗಳನ್ನು ಮತ್ತು ಮನೆಯ ಸಾಮಗ್ರಿಗಳನ್ನು ಸ್ಥಳಾಂತರಗೊಳಿಸುವ ಸಲುವಾಗಿ ಎಸ್ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ನೆರೆ ಸಂತ್ರಸ್ತರಿಗೆ ಸಹಾಯಕ ಮಿತ್ರರಾಗಿ ಸೇವೆ ಸಲ್ಲಿಸಿದರು. ಈ ಕಾರ್ಯಾಚರಣೆಯ ನೇತೃತ್ವವನ್ನು ಎಸ್ಡಿಪಿಐ ಗ್ರಾಮ ಸಮಿತಿ ಅಧ್ಯಕ್ಷ ಇಕ್ಬಾಲ್ ಅಮೆಮಾರ್ ಮತ್ತು ಪಾಪ್ಯುಲರ್ ಫ್ರಂಟ್ ವಲಯ ಅಧ್ಯಕ್ಷರಾದ ನಿಸಾರ್ ವಳವೂರು ರವರು ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ನಝೀರ್ ಹತ್ತನೇ ಮೈಲು ಕಲ್ಲು,ಸಲೀಂ ಕುಂಪನಮಜಲು, ಪುತ್ತುಬಾವ ಫರಂಗಿಪೇಟೆ, ಶಾಫಿ ಅಮೆಮಾರ್, ಶೆರೀಫ್ ಕುಂಪನಮಜಲು ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಸೆಲೀಂ ಕುಂಪನಮಜಲ್ ರವರು ಪುದು ಗ್ರಾಮದಲ್ಲಿ ಮಳೆಯು ನಿರಂತರವಾಗಿ ಸುರಿಯುತ್ತಿದ್ದು ಗ್ರಾಮ ಪಂಚಾಯತ್ ವತಿಯಿಂದ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಹಾಗೂ ಇನ್ನಷ್ಟು ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಕೂಡಲೇ ತಮ್ಮ ವಾಸ್ತವ್ಯವನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಲು ಸಲಹೆಯನ್ನು ನೀಡಿದರು ಹಾಗೂ ಯಾವುದೇ ಸಂದರ್ಭದಲ್ಲೂ ನೆರೆ ಪರಿಹಾರ ಕಾರ್ಯಾಚರಣೆಯನ್ನು ನಡೆಸಲು ಎಸ್ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್ ರೆಸ್ಕ್ಯೂ ತಂಡದ ಸದಸ್ಯರು ಸನ್ನದ್ಧರಾಗಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಗ್ರಾಮ ಲೆಕ್ಕಾಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದು ಕೊಂಡರು.
ಈ ಸಂದರ್ಭದಲ್ಲಿ ಗ್ರಾಮ ವ್ಯಾಪ್ತಿಯಿಂದ ಹೊರಗಿದ್ದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆಯವರು ತಾಲೂಕು ಮತ್ತು ಜಿಲ್ಲಾ ಮಟ್ಟದ ಸರಕಾರಿ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದಾಗ ಎಸ್ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್ ಕಾರ್ಯಾಚರಣೆಯನ್ನು ಶ್ಲಾಘಿಸಿ ಇನ್ನು ಮುಂದಿನ ಎಲ್ಲಾ ನೆರೆ ಪರಿಹಾರ ಕಾರ್ಯಾಚರಣೆಯಲ್ಲಿ ಜಿಲ್ಲಾಡಳಿತವು ನೇರ ಸಹಕಾರ ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.