ಪುತ್ತೂರು (www.vknews.com) ; ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ದೇಶದ 73 ನೇ ಸ್ವಾತಂತ್ರ್ಯೊತ್ಸವ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಕೆ.ಪಿ.ಅಹ್ಮದ್ ಹಾಜಿ ಆಕರ್ಷನ್ ಅವರು ಧ್ವಜಾರೋಹಣ ಗೈದು ಸ್ವಾತಂತ್ರ್ಯೋತ್ಸವದ ಶುಭ ಸಂದೇಶವನ್ನು ನೀಡಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯು.ಮುಹಮ್ಮದ್ ಹಾಜಿ ಪಡೀಲ್, ಸಂಚಾಲಕ ಮುಹಮ್ಮದ್ ಸಾಹೇಬ್, ಟ್ರಸ್ಟ್ ಸದಸ್ಯ ಯು ಅಬ್ದುಲ್ಲಾ ಹಾಜಿ ಅಸ್ವಾಲಿಹಾ ಶರೀಅತ್ ಕಾಲೇಜ್ ಪ್ರಾಂಶುಪಾಲ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ ಮೊದಲಾದವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಕೆ.ವೈ.ಪಿ.ಯೂಸುಫ್ ಹಾಜಿ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಅಝಾದ್ ,ಸದಸ್ಯ ಎಲ್.ಟಿ.ಅಬ್ದುಲ್ ರಝಾಕ್ ಹಾಜಿ, ಸಾಲ್ಮರ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮೋಹನಾಂಗಿ, ಕನ್ನಡ ಮತ್ತು ಇಂಗ್ಲೀಷ್ ಮೀಡಿಯಂ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಹಸನ್ ಮತ್ತು ಯೂಸುಫ್,ಸಮೂಹ ಶಿಕ್ಷಣ ಸಂಸ್ಥೆಗಳ ಶಿಕ್ಷಕರು,ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.
ಶಾಲಾ ಪ್ರಾಂಶುಪಾಲ ದಿನೇಶ್ ರೈ ಅತಿಥಿಗಳನ್ನು ಸ್ವಾಗತಿಸಿದರು.ಶಿಕ್ಷಕ ಭಾಸ್ಕರ ಶೆಟ್ಟಿಯವರು ವಂದಿಸಿದರು.ಶಿಕ್ಷಕ ರವೂಫ್ ವಿವಿಧ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕರಾದ ಅಶ್ರಫ್ ಮತ್ತು ಜಯರಾಮ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.