ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಇಲ್ಲಿನ ಭಂಡಾರಿಬೆಟ್ಟು ಎಂಬಲ್ಲಿ ಅ 9 ರಂದು ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮೆಲ್ಕಾರ್ ಸಮೀಪದ ನರಹರಿ ನಗರ ನಿವಾಸಿ, ಅಟೋ ರಿಕ್ಷಾ ಚಾಲಕ ರಾಘವೇಂದ್ರ ರಾವ್ (40) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅ 9 ರಂದು ಬಂಟ್ವಾಳ ಸಮೀಪದ ಭಂಡಾರಿಬೆಟ್ಟು ಎಂಬಲ್ಲಿ ಕಾರು ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ರಿಕ್ಷಾ ಚಾಲಕ ರಾಘವೇಂದ್ರ ರಾವ್ ಅವರಿಗೆ ಗಾಯಗಳಾಗಿತ್ತು. ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ರಾಘವೇಂದ್ರ ಅವರು ಸೋಮವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ಬಂಟ್ವಾಳ ಟ್ರಾಫಿಕ್ ಪೆÇಲೀಸರು ತಿಳಿಸಿದ್ದಾರೆ.