ಮರ್ಹೂಮ್ ಮಿತ್ತಬೈಲ್ ಜಬ್ಬಾರ್ ಉಸ್ತಾದ್(ನ.ಮ) ಸ್ಮರಣಾರ್ಥ ಪಾಣೆಮಂಗಳೂರಿನಲ್ಲಿ ಯಶಸ್ವೀ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ(ವಿಶ್ವಕನ್ನಡಿಗ ನ್ಯೂಸ್): ಅಕ್ಟೋಬರ್ 13 : ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)ಹಾಗೂ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್,ಎಸ್ ಕೆ ಎಸ್ ಎಸ್ ಎಫ್ ಆಲಡ್ಕ ಶಾಖೆ ಇದರ ಆಶ್ರಯದಲ್ಲಿ ಕಣಚೂರು ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವು ದಿನಾಂಕ 13 ಅಕ್ಟೊಬರ್ 2019 ನೇ ಆದಿತ್ಯವಾರದಂದು ಎಸ್.ಎಸ್.ಅಡಿಟೋರಿಯಂ ಆಲಡ್ಕ,ಪಾಣೆಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯಿತು.

ಸಭಾ ಕಾರ್ಯಕ್ರಮವು ಎಸ್ ಕೆ ಎಸ್ ಎಸ್ ಎಫ್ ಆಲಡ್ಕ ಯುನಿಟ್ ಅಧ್ಯಕ್ಷರಾದ ಎನ್.ಬಿ ಅಬೂಬಕರ್ ಹಾಜಿ ಅಧ್ಯಕ್ಷತೆಯಲ್ಲಿ ಎಸ್ ಕೆ ಎಸ್ ಎಸ್ ಎಫ್ ಪಾಣೆಮಂಗಳೂರು ಅದ್ಯಕ್ಷರಾದ ಅಬೂ ಸ್ವಾಲಿಹ್ ಫೈಝಿ ಉದ್ಘಾಟಿಸಿ ಶುಭ ಹಾರೈಸಿದರು.

ಎಸ್ ಕೆ ಎಸ್ ಎಸ್ ಎಫ್ ಬಂಟ್ವಾಳ ವಲಯ ಅದ್ಯಕ್ಷರಾದ ಬಹು:ಇರ್ಷಾದ್ ದಾರಿಮಿ ದುವಾಶಿರ್ವಚನ ನೀಡಿದರು.

ಮುಖ್ಯ ಅತಿಥಿಯಾಗಿ ಬಹು|ಅಬ್ದುಲ್ ದಾರಿಮಿ ಕುಕ್ಕಿಲ,ಅಬ್ದುಲ್ ಖಾದರ್ ಮದನಿ,ಖಲೀಲ್ ದಾರಿಮಿ,ಫೈರೋಝ್ ವಲಚ್ಚಿಲ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಕಾರ್ಯನಿರ್ವಾಹಕರು ಉಪಸ್ಥಿತರಿದ್ದರು.

ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಒಟ್ಟು 315 ಮಂದಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.75 ಮಂದಿಗೆ ಕಣಚೂರು ಆಸ್ಪತ್ರೆಯಲ್ಲಿ ಉಚಿತವಾಗಿ ಹೆಚ್ಚಿನ ಚಿಕಿತ್ಸೆಗಾಗಿ ಶಿಫಾರಸು ಮಾಡಲಾಯಿತು.18 ಮಂದಿ ರಕ್ತ ನೀಡಿ ಜೀವದಾನಿಗಳಾದರು.ದಾನಿಗಳಿಂದ ರಕ್ತ ಸಂಗ್ರಹ ಹಾಗೂ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಣಚೂರು ಆಸ್ಪತ್ರೆ ದೇರಳಕಟ್ಟೆ ಇದರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.


ರಕ್ತದಾನ ಮಾಡಿದ ಸರ್ವ ಸಹೃದಯೀ ದಾನಿಗಳಿಗೂ, ಆಸ್ಪತ್ರೆ ಸಿಬ್ಬಂದಿ ವರ್ಗಕ್ಕೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಹಾಗೂ ಕಾರ್ಯಕ್ರಮದ ಯಶಸ್ವಿಯಾಗಿ ಹಗಳಿರುಲು ದುಡಿದ ಎಲ್ಲಾ ಕಾರ್ಯಕರ್ತರಿಗೂ,ಮಾಧ್ಯಮ ಪ್ರತಿನಿಧಿಗಳಿಗೂ ಸಂಘಟಕರು ಕೃತಜ್ಞತೆಯನ್ನು ತಿಳಿಸಿದ್ದಾರೆ.

    Leave Your Comment

    Your email address will not be published.*

    Open chat
    1
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...