ವಿಜಯಪುರ(ವಿಶ್ವಕನ್ನಡಿಗ ನ್ಯೂಸ್): ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಏಕೈಕ ಉದ್ದೇಶದಿಂದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಹೈಕಮಾಂಡ್ ಸೂಚಿಸಿತ್ತು. ಹೈಕಮಾಂಡ್ ಆದೇಶವನ್ನು ನಾನು ಪಾಲಿಸಿದೆ. ಇದರಲ್ಲಿ ನನ್ನ ಪಾತ್ರ ಇಷ್ಟೆ. ಹೈಕಮಾಂಡ್ ಜೊತೆ ಚರ್ಚಿಸಿದ್ದು, ಸರ್ಕಾರ ರಚಿಸಿದ್ದು ದೇವೇಗೌಡರು. ನಾನು ಯಾರ ಮುಖ್ಯಮಂತ್ರಿ ಪಟ್ಟವನ್ನು ತಪ್ಪಿಸಿಲ್ಲ ಎಂದರು.
ಉಳಿದ 7 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ನಂತರ ಹೈಕಮಾಂಡ್ ಜೊತೆ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ನಮ್ಮ ಗುರಿ ಕನಿಷ್ಠ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು. 15 ಸ್ಥಾನ ಗೆದ್ದರೂ ಆಶ್ಚರ್ಯವಿಲ್ಲ. ನಾವಾಗಿಯೇ ಹಣ, ಅಧಿಕಾರದ ಆಮಿಷ ಒಡ್ಡಿ ಬೇರೆ ಪಕ್ಷದವರನ್ನು ನಮ್ಮ ಪಕ್ಷಕ್ಕೆ ಕರೆತಂದರೆ ಅದು ಆಪರೇಷನ್ ಆಗುತ್ತದೆ. ಆದರೆ ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಅವರಾಗಿಯೇ ಬಂದರೆ ಅದು ಆಪರೇಷನ್ ಹೇಗಾಗುತ್ತದೆ? ಈ ಆಪರೇಷನ್, ಸರ್ಜರಿ ಇದರಲ್ಲಿ ಸಿಎಂ ಯಡಿಯೂರಪ್ಪ ಅವರು ಸ್ಪೆಷಲಿಸ್ಟ್. ನಾನು ಡಾಕ್ಟರೂ ಅಲ್ಲ, ನನಗೆ ಯಾವ ರೋಗಿಗಳು ಗೊತ್ತಿಲ್ಲ ಎಂದು ಹೇಳಿದರು.
ಉಪಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಸ್ ಪಕ್ಷದಿಂದ ಇನ್ನಷ್ಟು ಜನ ನಮ್ಮ ಪಕ್ಷಕ್ಕೆ ಬರುತ್ತಾರೆಂದು ಸಚಿವ ಸಿ.ಟಿ ರವಿ ಹೇಳಿದ್ದಾರಂತೆ. ಮೊದಲು ಬಿಜೆಪಿ ಬಿಟ್ಟು ಹೋಗುತ್ತಿರುವವರನ್ನು ತಡೆಯಲಿ, ಆಮೇಲೆ ಬೇರೆ ಮಾತು. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಹೇಳಿಕೆಗಳನ್ನು ಕೇಳಿ ಕೇಳಿ ಸಾಕಾಗಿದೆ. ಬಿಜೆಪಿಯವರ ಬಳಿ ಹಣವಿದೆ, ಅಧಿಕಾರ ಹಿಡಿಯಲು ಆಪರೇಷನ್ ಕಮಲವನ್ನೂ ಮಾಡ್ತಾರೆ, ಅನೈತಿಕ ರಾಜಕಾರಣವನ್ನೂ ಮಾಡ್ತಾರೆ. ಮೌಲ್ಯಾಧಾರಿತ ರಾಜಕಾರಣ ಅಂದ್ರೆ ಏನು ಅಂತಲೇ ಅವರಿಗೆ ಗೊತ್ತಿಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಸ್ವಲ್ಪವೂ ಗೌರವವಿಲ್ಲ. ಹಿಂಬಾಗಿಲ ರಾಜಕಾರಣಕ್ಕೆ ಬಿಜೆಪಿಯವರು ಹೆಸರುವಾಸಿ ಎಂದರು.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.