ಕುಂಬ್ಳೆ(ವಿಶ್ವಕನ್ನಡಿಗ ನ್ಯೂಸ್): ನನ್ಮ ಕೂಟಾಯಿಮ ಮುಳಿಯಡ್ಕಮ್,ಕುಂಬ್ಳೆ ಮತ್ತು ಜನರಕ್ಷಾ ಬ್ಲಡ್ ಡೋನರ್ಸ್ ಕಾಸರಗೋಡು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) (ಎಚ್.ಡಿ.ಎಫ್.ಸಿ ಬ್ಯಾಂಕ್ ಮಂಗಳೂರು,ಅಧಿಕೃತ ಪ್ರಾಯೋಜಕರು) ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 09 ನವೆಂಬರ್ 2019ನೇ ಶನಿವಾರದಂದು ಕಾಸರಗೋಡು ಕುಂಬ್ಳೆಯ ಮುಳಿಯಡ್ಕಮ್ ಅಂಗನವಾಡಿ ಶಾಲಾ ವಠಾರದಲ್ಲಿ ಯಶಸ್ವಿಯಾಗಿ ನಡೆಯಿತು.
ಜನರಕ್ಷಾ ಚಾರೀಟೇಬಲ್ ಟ್ರಸ್ಟ್ ಇದರ ಚೆಯರ್ ಮ್ಯಾನ್ ನಾಸರ್ ಬಾಯಾರ್ ರವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮವನ್ನು ಸಾಮಾಜಿಕ ಸೇವಾ ಕಾರ್ಯಕರ್ತ ಕಯ್ಯುಂ ಮಾನ್ಯರವರು ಉದ್ಘಾಟಿಸಿದರು.
ವೇದಿಕೆಯಲ್ಲಿ ರಿಯಾಝ್ ಕುನ್ನಿಲ್,ರಝಾಕ್ ಮಾಸ್ಟರ್,ನಾಸರ್ ಮಾನ್ಯ,ಇಮ್ರಾನ್ ಬೈತಾರ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಇದರ ನಿರ್ವಾಹಕರು ಉಪಸ್ಥಿತರಿದ್ದರು.
ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರದಲ್ಲಿ ಒಟ್ಟು 31 ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು.ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇದರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.
ನನ್ಮ ಕೂಟಾಯಿಮ ಇದರ ಅದ್ಯಕ್ಷರಾದ ರಜಾಕ್ ಮುಳಿಯಡ್ಕ ಸ್ವಾಗತಿಸಿ,ಕಾರ್ಯಕ್ರಮ ನಿರೂಪಣೆಗೈದರು.
ರಕ್ತದಾನ ಮಾಡಿದ ಸರ್ವ ಸಹೃದಯೀ ದಾನಿಗಳಿಗೂ, ಆಸ್ಪತ್ರೆ ಸಿಬ್ಬಂದಿ ವರ್ಗಕ್ಕೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಹಾಗೂ ಕಾರ್ಯಕ್ರಮದ ಯಶಸ್ವಿಯಾಗಿ ಹಗಳಿರುಲು ದುಡಿದ ಎಲ್ಲಾ ಕಾರ್ಯಕರ್ತರಿಗೂ,ಮಾಧ್ಯಮ ಪ್ರತಿನಿಧಿಗಳಿಗೂ ಸಂಘಟಕರು ಕೃತಜ್ಞತೆಯನ್ನು ತಿಳಿಸಿದ್ದಾರೆ.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.