
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ಸಜಿಪನಡು ಗ್ರಾಮದಲ್ಲಿ ನಡೆದ ಜಾನುವಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಬೋಳಂತೂರು ಗ್ರಾಮದ ಕೊಕ್ಕಪುಣಿ ಕ್ವಾಟ್ರಸ್ ನಿವಾಸಿ ನಜಾದುದ್ದೀನ್ ಅಲಿಯಾಸ್ ನಝೀರ್ (26) ಹಾಗೂ ಅರ್ಕುಳ ಗ್ರಾಮದ ಕೊಪ್ಪಳ-ಗಣೇಶ್ ತೋಟ ಮನೆ ನಿವಾಸಿ ಅಬ್ದುಲ್ ಸಲಾಂ (22) ಎಂಬವರನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಆಮ್ನಿ ಕಾರು ಹಾಗೂ ಕಪ್ಪು ಬಣ್ಣದ ಹಸುವೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಳೆದ ನ 28 ರಂದು ಸಜಿಪನಡು ಗ್ರಾಮದ ಸಜಿಪದಿಂದ ಕಂಚಿನಡ್ಕಕ್ಕೆ ತೆರಳುವ ರಸ್ತೆಯಲ್ಲಿ ಜಾನುವಾರುಗಳು ಕಳವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತರು ಈ ಪ್ರಕರಣವಲ್ಲದೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಕಾರಾಜೆ ಹಾಗೂ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರಿನಲ್ಲೂ ಜಾನುವಾರು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪೊಲೀಸರು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.