ನಾಳೆ ಜ.30: ಉಡುಪಿಗೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್

ಉಡುಪಿ(ವಿಶ್ವಕನ್ನಡಿಗ ನ್ಯೂಸ್): ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆೊಳಗಾಗಿರುವ ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ ನಾಳೆ ಜನವರಿ 30 ಉಡುಪಿಯ ಮಿಷನ್ ಹಾಸ್ಪಿಟಲ್ ಬಳಿ ಬೃಹತ್ ಸಮಾವೇಶ ನಡೆಯಲಿದೆ.

ಸಮಾವೇಶವು ಅಪರಾಹ್ನ 3:30 ಕ್ಕೆ ಪ್ರಾರಂಭವಾಗಲಿದ್ದು, ಸಮಾವೇಶದಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಹಾಗೂ ಚಿಂತಕ ಮಹೇಂದ್ರ ಕುಮಾರ್, ನಿವೃತ್ತ ಐಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್, ವಿಧ್ಯಾರ್ಥಿ ಮುಖ್ಯಸ್ಥೆ ಅಮೂಲ್ಯ, ಸಾಮಾಜಿಕ ಕಾರ್ಯಕರ್ತೆ ಕವಿತಾ ರೆಡ್ಡಿ, ಸಾಮಾಜಿಕ ಕಾರ್ಯಕರ್ತ ಮೆಹ್ರೂಝ್ ಖಾನ್, ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್, ಇವರುಗಳು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗೂ ಇನ್ನಿತರ ನೇತಾರರು, ಧರ್ಮ ಗುರುಗಳು, ಸಮಾಜ ಸೇವಕರು, ಹೋರಾಟಗಾರರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

    Leave Your Comment

    Your email address will not be published.*

    Open chat
    1
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...