ಮಂಗಳೂರು: ತಡೆಗೋಡೆ ಕುಸಿದು ಇಬ್ಬರು ಕಾರ್ಮಿಕರು ಮೃತ್ಯು

ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಬಂಟ್ಸ್ ಹಾಸ್ಟೆಲ್‌ನ ಕರಂಗಲ್ಪಾಡಿ ಜಂಕ್ಷನ್ ಬಳಿ ತಡೆಗೋಡೆ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಘಟನಾ ಸ್ಥಳಕ್ಕೆ ಪಾಂಡೇಶ್ವರ ಹಾಗೂ ಕದ್ರಿಯ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಮೃತರನ್ನು ಬಾಗಲಕೋಟೆ ನಿವಾಸಿ ಭೀಮಪ್ಪ ಮತ್ತು ಪಶ್ಚಿಮ ಬಂಗಾಳದ ಮಸೂದ್ ಎಂದು ಗುರುತಿಸಲಾಗಿದೆ.

    Leave Your Comment

    Your email address will not be published.*

    Open chat
    1
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...