ಬೆಂಗಳೂರು,(ವಿಶ್ವಕನ್ನಡಿಗ ನ್ಯೂಸ್):ಬೆಂಗಳೂರು ನಗರದ ಜಗಜೀವನ್ರಾಮ್ ನಗರದ ನಿವಾಸಿ ಬಿ.ಆರ್.ಅಮರನಾಥ್ ಅವರನ್ನು ಕೆ.ಪಿ.ಸಿ.ಸಿ. ಅನುಮೋದನೆ ಮೇರೆಗೆ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಜಿಲ್ಲಾಧ್ಯಕ್ಷ ಜಿ.ಶೇಖರ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಸ್ಥಳೀಯ ಕಾಂಗ್ರೆಸ್ ನಾಯಕರುಗಳ ಸಹಕಾರದೊಂದಿಗೆ ಪಕ್ಷದ ಸಬಲೀಕರಣದಲ್ಲಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಶ್ರಮಿಸಬೇಕೆಂದು ಸೂಚನೆ ನೀಡಿದ್ದಾರೆ.
ಚಾಮರಾಜಪೇಟೆಯ ವಿಧಾನಸಭಾ ಕ್ಷೇತ್ರದ ನಾಯಕ ಬಿ.ಜೆಡ್.ಜಮೀರ್ ಅಹಮದ್ಖಾನ್ ಅವರು ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿರುವ ಬಿ.ಆರ್.ಅಮರನಾಥ್ ಅವರಿಗೆ ಆದೇಶ ಪತ್ರವನ್ನು ಹಸ್ತಾಂತರಿಸಿ ಪಕ್ಷ ಸಂಘಟನೆ ವಿಚಾರದಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡರಾದ ಬಿ.ಕೆ.ಅಲ್ತಾಫ್ ಖಾನ್, ಗೋವಿಂದರಾಜು, ಡಿ.ಸಿ.ರಮೇಶ್, ಫಯಾಝ್, ಪ್ರಶಾಂತ್, ಭಾಸ್ಕರ್, ಶಂಕರ್, ಉಲ್ಲಾಸ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.