ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ನಗರದ ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಶಂಕಿತ ಕೊರೋನಾ ಸೋಂಕಿತರೊಬ್ಬರು ಮಹಡಿ ಮೇಲಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿದೇಶದಿಂದ ವಾಪಸ್ ಆಗಿದ್ದ ಈ ವ್ಯಕ್ತಿಯನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿತ್ತು. ತಪಾಸಣೆಯ ವರದಿ ಬರುವವರೆಗೆ ಈತನನ್ನು 14 ದಿನಗಳ ನಿರ್ಬಂಧಕ್ಕೆ ಒಳಪಡಿಸಲಾಗಿತ್ತು. ಇದಕ್ಕೆ ಈತ ತೀವ್ರ ವಿರೋಧ ವ್ಯಕ್ತಪಡಿಸಿದ್ದ,
ವಿರೋಧದ ನಡುವೆಯೂ ಅಧಿಕಾರಿಗಳು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯ 7ನೇ ಅಂತಸ್ತಿನಲ್ಲಿರುವ ಕೊರೋನಾ ವಿಶೇಷ ನಿರ್ಬಂಧಿತ ವಾರ್ಡ್ ನಲ್ಲಿ ಈತನನ್ನು ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಈತ ತನ್ನ ಕೊಠಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.