ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಮಹಾಮಾರಿ ಕೊರೋನಾ ವೈರಸ್ ಗೆ ತುತ್ತಾಗಿ ದೇಶದಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ.
ಕೊರೋನಾ ವೈರಸ್ ನಿಂದ ಭಾರತದಲ್ಲಿ ಅತೀ ಹೆಚ್ಚು ಮಂದಿ ಸಾವಿಗೀಡಾದ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಗುಜರಾತ್ ಎರಡನೇ ಸ್ಥಾನದಲ್ಲಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಮಾರಿಗೆ ಬಲಿಯಾದವರ ಸಂಖ್ಯೆ ಇಂದು 34ಕ್ಕೇರಿದೆ.
ದೇಶದಲ್ಲಿ ಇದುವರೆಗೆ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 1196ರ ಗಡಿ ದಾಟಿದೆ. ವಲಸಿಗರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲಾ ರಾಜ್ಯ ಮತ್ತು ಜಿಲ್ಲಾ ಗಡಿಗಳನ್ನು ಮುಚ್ಚುವಂತೆ ಕೇಂದ್ರ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈಗಾಗಲೇ ಗಡಿಗಳ ಮೂಲಕ ಸಂಚರಿಸಿರುವ ವಲಸಿಗರನ್ನು 14 ದಿನಗಳ ಕಾಲ ನಿರ್ಬಂಧದಲ್ಲಿಡುವಂತೆ ಸೂಚಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.