ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಿಸಿದೆ. ಇಂತಹ ಸಂದರ್ಭದಲ್ಲಿ ನಾವು ಕೊರೋನಾ ವೈರಸ್ ಜೊತೆಯೇ ಜೀವನ ಕಟ್ಟಿಕೊಳ್ಳಬೇಕಾದ ಸಮಯ ಬಂದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ದೇಶದಲ್ಲಿ ಸೋಂಕಿತರ ಸಂಖ್ಯೆ 40 ಸಾವಿರ ಗಡಿ ದಾಟಿದೆ. ದೇಶಾದ್ಯಂತ ಲಾಕ್ ಡೌನ್ ಅನ್ನು ಮತ್ತೆ ಎರಡು ವಾರಗಳ ಕಾಲ ವಿಸ್ತರಿಸಿದ್ದು, ಇಡೀ ದೆಹಲಿ ರೆಡ್ ಜೋನ್ ನಲ್ಲಿದೆ. ಆದರೂ ಕೇಂದ್ರ ಕೆಲವು ವಿನಾಯ್ತಿಗಳನ್ನು ನೀಡಿದೆ. ಅದಕ್ಕೆ ನಾವು ಅನುಮತಿ ನೀಡುತ್ತಿದ್ದೇವೆ ಎಂದರು.
ಸರ್ಕಾರಕ್ಕೆ ಬರಬೇಕಾದ ಆದಾಯ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ದೆಹಲಿಯನ್ನು ಪುನಃ ಆರಂಭಿಸಲು ಅನುಮತಿ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.