ಶಿರಾ ಕಂಟೈನ್ಮೆಂಟ್ ತೆರವು

ತುಮಕೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಪಿ-84 ವ್ಯಕ್ತಿಯು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಪಿ-84ರ ಸಂಪರ್ಕದಲ್ಲಿದ್ದವರ ಮಾದರಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಎಲ್ಲಾ ಮಾದರಿಗಳು ನೆಗೆಟಿವ್ ಬಂದಿವೆ. ಆದ್ದರಿಂದ ಶಿರಾ ತಾಲೂಕಿನಲ್ಲಿ ಕಂಟೈನ್ಮೆಂಟ್ ವಲಯವನ್ನು ತೆರೆವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 7 ಪ್ರಕರಣಗಳು ಕಂಡು ಬಂದಿವೆ. ಈ ಪೈಕಿ ಇಬ್ಬರು ಮರಣ ಹೊಂದಿದ್ದು, ಒಬ್ಬರು ಗುಣಮುಖರಾಗಿದ್ದಾರೆ, ಉಳಿದ ನಾಲ್ಕು ಮಂದಿಯನ್ನು ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ತುಮಕೂರು ಜಿಲ್ಲೆ ಆರೇಂಜ್ ವಲಯದಲ್ಲಿದ್ದು, ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮಳಿಗೆಗಳನ್ನು ತೆರೆದು ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲು ಅವಕಾಶ ನೀಡಿದ್ದು, ಶಿರಾದಲ್ಲೂ ಕೂಡ ಎಲ್ಲಾ ಅಂಗಡಿ ಮಳಿಗೆಗಳನ್ನು ತೆರೆಯುವಂತೆ ಅವಕಾಶ ಮಾಡಿಕೊಡುತ್ತೇವೆ. ತುಮಕೂರು ಜಿಲ್ಲೆಯಲ್ಲಿ 3 ಕಂಟೈನ್ಮೆಂಟ್ ವಲಯಗಳಾಗಿ ವಿಂಗಡಿಸಲಾಗಿದೆ. ಆದ್ದರಿಂದ ವೈನ್ ಶಾಪ್‌ಗಳನ್ನು ತೆರೆಯದಂತೆ ನಿರ್ದೇಶನ ನೀಡಲಾಗಿದೆ ಎಂದರು.

ವರದಿಗಾರರು,
ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...