ನವದೆಹಲಿ(www.vknews.in): ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದ ಕುರಿತು ವದಂತಿಗಳು ಹರಿದಾಡುತ್ತಿದೆ. ಅಮಿತ್ ಶಾ ಎಲುಬು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆಂದು ಹಾಗಾಗಿ ಅವರು ಕೊರೊನಾ ವೈರಸ್ ಲಾಕ್ ಡೌನ್ ನಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಕಾಣಿಸಿಕೊಂಡಿಲ್ಲ ಎಂಬ ಊಹಾಪೋಹ ಸೃಷ್ಟಿಸಲಾಗಿತ್ತು.
ಈ ಕುರಿತು ಸ್ಪಷ್ಟನೆ ನೀಡಿದ ಅಮಿತ್ ಶಾ ‘ ನಾನು ಆರೋಗ್ಯವಾಗಿದ್ದೇನೆ. ಯಾವುದೇ ಕಾಯಿಲೆ ನನಗಿಲ್ಲ. ದೇಶವೇ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಈ ಸಮಯದಲ್ಲಿ ವದಂತಿಗಳ ಕುರಿತು ನಾನು ತಲೆಕೆಡಿಸಿ ಕೊಳ್ಳುವುದಿಲ್ಲ’ ಎಂದು ಹೇಳಿದ್ದಾರೆ।
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.