ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್):ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಇದೇ ಮೊದಲ ಬಾರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು ಜಿಲ್ಲೆಯ ಜನರಲ್ಲಿ ತೀವ್ರ ಆತಂಕ ಮನೆ ಮಾಡಿದೆ.
ಇದುವರೆಗೂ ವಿದೇಶಿ ಪ್ರವಾಸದ ಹಿನ್ನಲೆ ಇರುವ ಹಾಗೂ ಅವರ ಸಂಪರ್ಕಿತ ವ್ಯಕ್ತಿಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದ ಮಹಾಮಾರಿ ಕೋವಿಡ್-19 ಇದೀಗ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ವಯೋವೃಧ್ದರೊಬ್ಬರಲ್ಲಿ ದೃಢಪಟ್ಟಿದೆ.
ಜಿಲ್ಲೆಯ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ 71 ವರ್ಷದ ವ್ಯಕ್ತಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದ್ದು ಅದು ಆರೋಗ್ಯ ಇಲಾಖೆ ರ್ಯಾಂಡಮ್ ಆಗಿ ನಡೆಸಿರುವ ವೈದ್ಯಕೀಯ ಪರೀಕ್ಷೆಯಲ್ಲಿ ಕೋವಿಡ್-19 ಪಾಸಿಟೀವ್ ಬಂದಿದೆ ಯಾವುದೇ ಪ್ರವಾಸದ ಹಿನ್ನಲೆ ಇಲ್ಲದ ವ್ಯಕ್ತಿಗೆ ಆರೋಗ್ಯ ಇಲಾಖೆಯ ಸರ್ವೇಕ್ಷಣಾ ತಂಡ ರ್ಯಾಂಡಮ್ ಆಗಿ ನಡೆಸಿದ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ ಇವರ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪತ್ತೆ ಮಾಡಲಾಗುತ್ತಿದೆ.
ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಕೋವಿಡ್-19 ಸೋಂಕಿತ ವ್ಯಕ್ತಿ ಪತ್ತೆಯಾಗುತ್ತಿದ್ದಂತೆ ಚಿಂತಾಮಣಿ ನಗರ ಹಾಗೂ ಗ್ರಾಮೀಣ ಪ್ರದೇಶ ತಲ್ಲಣಗೊಂಡಿದೆ ಸೋಂಕು ಪತ್ತೆಯಾಗಿರುವ ಚಿಂತಾಮಣಿ ನಗರದ 10ನೇ ವಾರ್ಡ್ ಎನ್.ಆರ್.ಬಡಾವಣೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದ್ದು, ಬಡಾವಣೆಗೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.