ತುಮಕೂರು (www.vknews.com) : ಕೋವಿಡ್-೧೯ರ ಹಿನ್ನೆಲೆಯಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಣೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ, ಜಿಲ್ಲಾ ರೆಡ್ಡಿ ಜನ ಸಂಘದ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಕೆ.ವೆಂಕಟರೆಡ್ಡಿ ರಾಮರೆಡ್ಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡಿ., ಸೇರಿದಂತೆ ಜಿಲ್ಲಾಧಿಕಾರಿಗಳ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ : ರಾಹುಲಕ್ರಾಂತಿಕಾರಿ ಬೀದರ ಜಿಲ್ಲೆ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.