ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಮೇ.17 ಇಂದಿನಿಂದ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದು, ಲಾಕ್ ಡೌನ್ ಉಲ್ಲಂಘನೆ ಮಾಡಿದ್ರೆ ಕ್ರಿಮಿನಲ್ ಮೊಕದ್ಧಮೆ ದಾಖಲಿಸಲಾಗುವುದು ಎಂದು ಎಚ್ಚರಿಸದ್ದಾರೆ. ಜೊತೆಗೆ ಜನರ ಓಡಾಟಕ್ಕಾಗಿ ನಾಳೆಯಿಂದ ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಖಾಸಗಿ ಬಸ್ ಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಆಗಲಿದ್ದು, ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಇಲ್ಲದಿದ್ದಲ್ಲಿ ದಂಡ ವಿಧಿಸಲು ನಿರ್ಧಾರ ಕೈಗೊಳ್ಳಲಾದಿದೆ. 30 ಜನರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶ ಎಂದಿದ್ದಾರೆ.
ಅಟೋ, ಟ್ಯಾಕ್ಸಿ, ಓಡಾಟಕ್ಕೆ ಅನುಮತಿ ನೀಡಲಾಗಿದ್ದು, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಮಾಲ್, ಸಿನೆಮಾ ಥಿಯೇಟರ್, ಹೋಟೆಲ್ ಬಟ್ಟು ಉಳಿದ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.