ಒಮಾನ್(ವಿಶ್ವಕನ್ನಡಿಗ ನ್ಯೂಸ್): ಕಲ್ಲಡ್ಕದ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದಾಗ ವಿಷಯ ತಿಳಿದ ಸ್ಥಳೀಯ ಗೂಡಿನಬಳಿ ಯುವಕರಾದ ಮುಹಮ್ಮದ್, ಸಮೀರ್,ಝಾಯಿದ್ , ಆರಿಫ್, ಮುಕ್ತಾರ್ ತೌಸೀಫ್ ರವರು ಯಾವುದೇ ಜಾತಿ ಧರ್ಮ ವನ್ನು ಲೆಕ್ಕಿಸದೆ ಕೂಡಲೇ ತಮ್ಮ ಜೀವನವನ್ನು ಪಣಕ್ಕಿಟ್ಟು ನದಿಗೆ ಹಾರಿ ಆ ಯುವಕನನ್ನು ನದಿಯಿಂದ ದಡಕ್ಕೆ ಸೇರಿಸಿ ಪ್ರಥಮ ಚಿಕಿತ್ಸಾ ವಿಧಾನಗಳನ್ನು ನೀಡುವುದರ ಮೂಲಕ ಪ್ರಾಣವನ್ನು ರಕ್ಷಿಸಲು ಪ್ರಯತ್ನಿಸಿದರು.
ಆದರೆ ವಿಧಿಯ ಆಟವು ಬೇರೆಯಾಗಿತ್ತು. ಈ ವೀರ ಯುವಕರಿಗೆ ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್ ರಾಷ್ಟ್ರೀಯ ಸಮಿತಿಯು ಅಭಿನಂದನೆ ಸಲ್ಲಿಸುತ್ತದೆ.
ಈದುಲ್ ಫಿತ್ರ್ ಹಬ್ಬ ಆಚರಿಸುವ ದಿನದಂದು ನಡೆದ ಘಟನೆಯು ಇಸ್ಲಾಮ್ ಜಗತ್ತಿಗೆ ಶಾಂತಿ, ಸೌಹಾರ್ದತೆ, ತ್ಯಾಗವನ್ನು ನೆನಪಿಸುವ ಮಾನವೀಯತೆಯ ಸಂದೇಶವನ್ನು ನೀಡಿದ್ದಾರೆ. ಇಡೀ ನಾಡು ಹೆಮ್ಮೆಪಡುವಂತಹ ಇವರ ಸೇವೆಯು ಶ್ಲಾಘನೀಯ ಎಂದು ಕೆಸಿಎಫ್ ಒಮಾನ್ ಪ್ರತಿನಿಧಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.