ಕಾಂಗ್ರೇಸ್ ಸರ್ಕಾರಗಳ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲು ವಿ.ಸುಭ್ರಮಣಿ ಕರೆ


ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಕೈಗೊಂಡಿದ್ದ ಜನಪರ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲು ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರು ಶ್ರಮಿಸಬೇಕೆಂದು ಜಿಪಂ ಮಾಜಿ ಅಧ್ಯಕ್ಷ ವಿ.ಸುಭ್ರಮಣಿ ಕರೆ ನೀಡಿದರು.

ತಾಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿಯ ಯಣ್ಣೂರು ಗ್ರಾಮದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ-ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ಪ್ರತಿಜ್ಞೆ ದಿನ ಕಾರ್ಯಕ್ರಮದಲ್ಲಿ ಪ್ರತಿಜ್ಞೆ ಸ್ವೀಕರಿಸಿ ಮಾತನಾಡಿದ ಅವರು ಹಳ್ಳಿಯಿಂದ ದೆಹಲಿವರೆಗೆ ಕಾಂಗ್ರೇಸ್ ಪಕ್ಷವನ್ನು ತಳಮಟ್ಟದಿಂದ ಬಲಗೊಳಿಸಲು ಕಾಂಗ್ರೇಸ್ ಮುಖಂಡರು ಧೃಡಸಂಕಲ್ಪ ಮಾಡಿದ್ದಾರೆ ಕೆಪಿಸಿಸಿಯ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೇ,ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಅಧಿಕಾರ ಸ್ವೀಕರಿಸಿದ್ದು ಪಕ್ಷದಲ್ಲಿ ಕಾರ್ಯಕರ್ತರು ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡಲು ಸಹಕಾರಿಯಾಗಿದೆ ಎಂದರು.


ಚೀಮಂಗಲ ಗ್ರಾಮ ಪಂಚಾಯಿತಿಯ ಕಾಂಗ್ರೇಸ್ ಮುಖಂಡ ವೈ.ಬಿ.ಮಂಜುನಾಥ್ ಮಾತನಾಡಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ವಿ.ಮುನಿಯಪ್ಪ ಹಾಗೂ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಡಾ.ಶಶಿಧರ್ ಮುನಿಯಪ್ಪ ಅವರ ನೇತೃತ್ವದಲ್ಲಿ ಅನೇಕ ಜನಪರ ಹಾಗೂ ಅಭಿವೃಧ್ಧಿ ಕಾಮಗಾರಿಗಳು ನಡೆಯುತ್ತಿದೆ ಜಿಲ್ಲೆಯಲ್ಲಿ ಕ್ಷೇತ್ರವನ್ನು ಮಾದರಿಯಾಗಿ ಪರಿವರ್ತಿಸಲು ಶಾಸಕರು ವಿಶೇಷ ಕಾಳಜಿವಹಿಸಿದ್ದು ಕಾರ್ಯಕರ್ತರು ಶಾಸಕರ ಸಾಧನೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷವನ್ನು ಸಂಘಟನೆ ಮಾಡಬೇಕು ಪಕ್ಷದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಕಾರ್ಯಕರ್ತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿ ಸೂಕ್ತ ಸ್ಥಾನಮಾನ ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಮ್ಮ ನಾರಾಯಣಸ್ವಾಮಿ,ಚೀಮಂಗಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಈಶ್ವರ್,ಯುವ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ಮಂಜುನಾಥ್,ಅತ್ತಿಗಾನಹಳ್ಳಿ ನರಸಿಂಹಮೂರ್ತಿ,ಕೆಜಿಪುರ ಚಂದ್ರಪ್ಪ,ಗ್ರಾಪಂ ಸದಸ್ಯ ಮುನಿಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ

ವರದಿಗಾರರು,
ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...