ಕೇಂದ್ರ-ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ: ಎನ್.ಮುನಿಯಪ್ಪ ವಿಶ್ವಾಸ


ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿ ಪ್ರಾಮಾಣಿಕರಿಗೆ ಗೌರವ ಸಲ್ಲಿಸಲು ಕೆಪಿಸಿಸಿ ನೂತನ ಅಧ್ಯಕ್ಷರು-ಕಾರ್ಯಾಧ್ಯಕ್ಷರು ಧೃಡಸಂಕಲ್ಪ ಮಾಡಿದ್ದು ಅವರ ಕೈಬಲಪಡಿಸಿ ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸಬೇಕೆಂದು ಜಿಪಂ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಎನ್.ಮುನಿಯಪ್ಪ ಕರೆ ನೀಡಿದರು.

ತಾಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಆನಂದ್ ಅವರ ಸ್ವಗೃಹದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ-ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ಪ್ರತಿಜ್ಞೆ ದಿನ ಕಾರ್ಯಕ್ರಮದಲ್ಲಿ ಪ್ರತಿಜ್ಞೆ ಸ್ವೀಕರಿಸಿ ಮಾತನಾಡಿದ ಅವರು ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನ ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿವೆ ಕೊರೊನಾ ಸಂಕಷ್ಟದಲ್ಲಿರುವ ಜನರಿಗೆ ಸೂಕ್ತ ರೀತಿಯ ಸೌಲಭ್ಯಗಳು ಲಭಿಸುತ್ತಿಲ್ಲ ಆದರೇ ಸಂಕಷ್ಟದಲ್ಲಿರುವ ಜನರ ನೆರವಿಗೆ ಕಾಂಗ್ರೇಸ್ ಪಕ್ಷ ಧಾವಿಸಿದೆ ಬಡವರು-ಕೂಲಿ ಕಾರ್ಮಿಕರು-ರೈತರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಕಾಂಗ್ರೇಸ್ ಪಕ್ಷವನ್ನು ಬಲಗೊಳಿಸಲು ಜನ ಸಹಕಾರ ನೀಡಿ ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.

ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಆನಂದ್ ಮಾತನಾಡಿ ಸಮಾಜದಲ್ಲಿರುವ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಪಕ್ಷ ಕಾಂಗ್ರೇಸ್ ಎಂಬುದು ಸಾಬೀತಾಗಿದೆ ಕಾಂಗ್ರೇಸ್ ಕಾರ್ಯಕರ್ತರು ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃಧ್ಧಿ ಕಾಮಗಾರಿಗಳು ಹಾಗೂ ಜನಪರ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಟ್ಟು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೇ,ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಅವರ ಕೈಬಲಪಡಿಸಬೇಕೆಂದರು.

ಈ ಸಂದರ್ಭದಲ್ಲಿ ರೈತ ಸಂಘ ಹಾಗೂ ಹಸಿರುಸೇನೆಯ(ದಿ.ಪುಟ್ಟಣಯ್ಯ ಬಣ) ಜಿಲ್ಲಾ ಉಪಾಧ್ಯಕ್ಷ ಟಿ.ಕೆ.ಅರುಣ್ ಕುಮಾರ್, ಆರಾಧನಾ ಸಮಿತಿಯ ಮಾಜಿ ಸದಸ್ಯ ದ್ಯಾವಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಭವ್ಯಮಂಜುನಾಥ್,ತಲಕಾಯಲಬೆಟ್ಟ ದೇವಾಲಯ ಸಮಿತಿಯ ಅಧ್ಯಕ್ಷ ಅಶ್ವತ್ಥನಾರಾಯಣ, ವಕೀಲ ನರಸಿಂಹರೆಡ್ಡಿ,ಶಿವಾಚಾರಿ,ನಂಜಪ್ಪ, ಮುನಿಯಪ್ಪ, ಚಂದ್ರಪ್ಪ, ಶಂಕರ್ ನಾರಾಯಣ, ಕೃಷ್ಣಪ್ಪ, ನರಸಿಂಹಪ್ಪ, ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ

ವರದಿಗಾರರು,
ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...