ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್); ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಶಿಡ್ಲಘಟ್ಟ ನಗರದಲ್ಲಿ ಪ್ರಥಮವಾಗಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು ವಯೋವೃಧ್ಧ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದರಿಂದ ಶಿಡ್ಲಘಟ್ಟ ತಾಲೂಕಿನಲ್ಲಿ ಕೊರೊನಾ ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ ಮಹಿಳೆಯ ಸಂಪರ್ಕ ಸಾಧಿಸಿದ ಕುಟುಂಬ ಸದಸ್ಯರಿಗೆ ಈಗಾಗಲೇ ಗಂಟಲು ದ್ರವ ಪರೀಕ್ಷಾ ವರದಿ ನೆಗೆಟಿವ್ ಬಂದಿತ್ತು ಆದರೇ ಮಹಿಳೆ ಮಾತ್ರ ಸೋಂಕಿನಿಂದ ಚೇತರಿಸಿಕೊಳ್ಳದೆ ಮೃತಪಟ್ಟಿದ್ದಾಳೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ಧೃಡಪಟ್ಟಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತದಿಂದ ಬಿಗಿ ಕ್ರಮ ಕೈಗೊಳ್ಳುತ್ತಿದ್ದರು ಸಹ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ ಮನೆಯಿಂದ ಹೊರ ಬರುವಾಗ ಸ್ಯಾನಿಟೈಸರ್ ಹಾಕಿ,ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿಕೊಂಡರು ಸಹ ಇನ್ನೂ ಬಹುತೇಕ ನಾಗರಿಕರು ಮಾಸ್ಕ್ ಧರಿಸದೆ ನಗರದಲ್ಲಿ ಸಂಚರಿಸುತ್ತಿದ್ದಾರೆ ಪೋಲಿಸ್ ಮತ್ತು ನಗರಸಭೆಯ ಅಧಿಕಾರಿಗಳು ದಂಡ ವಿಧಿಸುವ ಕಾರ್ಯಚರಣೆ ನಡೆಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.