ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆಯುವ ಕಾಮಗಾರಿಯ ಗುಣಮಟ್ಟ ಕಾಪಾಡಲು ಹಿರಿಯ ಅಧಿಕಾರಿಗಳು ಗಮನಹರಿಸಬೇಕೆಂದು ಎಸ್.ಎನ್.ಕ್ರಿಯಾ ಟ್ರಸ್ಟ್ನಧ ಅಧ್ಯಕ್ಷ ಆಂಜಿನಪ್ಪ(ಪುಟ್ಟು) ಬಣದ ಮುಖಂಡ ಮಹಬೂಬ್ ಖಾನ್ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃಧ್ಧಿಗಾಗಿ ಅನುದಾನವನ್ನು ಬಿಡುಗಡೆ ಮಾಡುತ್ತಿದೆ ಆದರೇ ಅಂದಾಜು ವೆಚ್ಚದ ಅನುಗುಣವಾಗಿ ಮತ್ತು ಸರ್ಕಾರದ ಮತ್ತು ಇಲಾಖೆಯ ಮಾರ್ಗಸೂಚಿಗಳಂತೆ ಕಾಮಗಾರಿಗಳು ನಡೆಯುತ್ತಿಲ್ಲವೆಂದು ಎಂಬ ದೂರು ಸಾರ್ವಜನಿಕರಿಂದ ಕೇಳಿ ಬರುತ್ತಿದೆ ತಾಲೂಕು ಪಂಚಾಯಿತಿ,ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಿಂದ ಕೈಗೊಳ್ಳುವ ಕಾಮಗಾರಿಗಳು ಮತ್ತು ಲೋಕೋಪಯೋಗಿ ಇಲಾಖೆಯಿಂದ ನಡೆಯುವ ಕಾಮಗಾರಿಗಳು ಮತ್ತು ಅಂದಾಜುವೆಚ್ಚದ ಮಾಹಿತಿಯ ನಾಮಫಲಕವನ್ನು ಅಳಡಿಸಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಸರ್ಕಾರ ಸೋಂಕು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರು ವಕ್ಫ್ ಸಂಸ್ಥೆಗೆ ಸೇರಿದ ಜಾಗವನ್ನು ಕ್ವಾರಂಟೈನ್ ಕೇಂದ್ರ ಮಾಡಲು ಕ್ರಮ ಕೈಗೊಂಡಿರುವ ಸ್ವಾಗತಾರ್ಹ ಜಿಲ್ಲಾಡಳಿತ ಪ್ರತಿಯೊಂದು ತಾಲೂಕಿನಲ್ಲಿ ಅಧಿಕ ಸಂಖ್ಯೆಯಲ್ಲಿ ಕೋವಿಡ್ ಕೇಂದ್ರಗಳನ್ನು ತೆರೆದು ಅಲ್ಲಿಯೇ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದರು.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.