ಯೋಗಿ ಆದಿತ್ಯನಾಥ್ ಸಂಪುಟದ ಶಿಕ್ಷಣ ಸಚಿವೆ ಕಮಲ್ ರಾಣಿ ಕೋವಿಡ್‌ಗೆ ಬಲಿ

ಲಖನೌ(www.vknews.in): ಲಖನೌ ಆಸ್ಪತ್ರೆಯಲ್ಲಿ ಕರೋನವೈರಸ್ ಚಿಕಿತ್ಸೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉತ್ತರ ಪ್ರದೇಶದ ಶಿಕ್ಷಣ ಸಚಿವರಾಗಿದ್ದ ಕಮಲ್ ರಾಣಿ ಭಾನುವಾರ ಬೆಳಿಗ್ಗೆ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಚಿವರ ನಿಧನದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಆಗಸ್ಟ್ 5ಕ್ಕೆ ನಡೆಯಲಿರುವ ರಾಮ ಮಂದಿರದ ಭೂಮಿ ಪೂಜಾ ಸ್ಥಳದ ಸಿದ್ಧತೆಗಳನ್ನು ವೀಕ್ಷಿಸಲು ಇಂದು ಅಯೋಧ್ಯೆಗೆ ತೆರಳಲಿದ್ದ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ತಮ್ಮ ಅಯೋಧ್ಯೆ ಭೇಟಿಯನ್ನು ರದ್ದು ಗೊಳಿಸಿದ್ದಾರೆ.

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...