ಮಂಗಳೂರು (www.vknews.com) : ಡಿಸೆಂಬರ್ 19ರಂದು ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಗುಂಡೇಟಿನಿಂದ ಶ್ರೀ ನೌಶಿನ್ ಹಾಗೂ ಶ್ರೀ ಜಲೀಲ್ ಕುದ್ರೋಳಿ ಎಂಬವರು ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ, ಉಡುಪಿ ಇವರನ್ನು ಸರಕಾರ ನೇಮಿಸಿ ಆದೇಶ ಹೊರಡಿಸಿದೆ.
ಈ ಸಂಬಂಧ ಸದ್ರಿ ದಿನ ಈ ಘಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾವುದೇ ವ್ಯಕ್ತಿಗಳು ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅಂತಿಮ ಅವಕಾಶವನ್ನು ಆಗಸ್ಟ್ 11 ರಂದು ಪೂರ್ವಾಹ್ನ 11.00 ಗಂಟೆಯಿಂದ ಅಪರಾಹ್ನ 1.00 ಗಂಟೆ ಸಹಾಯಕ ಆಯುಕ್ತರ ಕೋರ್ಟ್ ಹಾಲ್, ಮಿನಿ ವಿಧಾನಸೌಧ, ಮಂಗಳೂರು, ಇಲ್ಲಿ ನಿಗಧಿಪಡಿಸಲಾಗಿತ್ತು , ಆದರೆ ಆ.11ರಂದು ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರು ಉಡುಪಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು , ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಅವರ ಪ್ರವಾಸ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿರುವುದರಿಂದ ಸದರಿ ವಿಚಾರಣೆಯನ್ನು ನಡೆಸಲು ಅನಾನುಕೂಲವಾಗಿರುವುದರಿಂದ ಅದನ್ನು ಮುಂದೂಡಲಾಗಿದೆ. ಮುಂದಿನ ವಿಚಾರಣಾ ದಿನಾಂಕದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.