ವರುಣನ ಆರ್ಭಟಕ್ಕೆ ಉಡುಪಿ ತತ್ತರ !

ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಇತಿಹಾಸದಲ್ಲಿ ಮೊದಲ ಭಾರಿಗೆ ಭಾರಿ ನೆರೆ ಹಾವಳಿಯಿಂದ ಉಡುಪಿ ನಗರದ ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಭೀಕರ ಮಳೆಯ ಪರಿಣಾಮ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಆವರಣ, ನಗರದ ರಾಷ್ಟ್ರೀಯ ಹೆದ್ದಾರಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು. ನಗರದ ಅಂಗಡಿ ಗೋದಾಮುಗಳಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಭಾರಿಯ ಮಳೆಯ ಪರಿಣಾಮ ಸ್ವರ್ಣ, ಸೀತನದಿ ಉಕ್ಕಿ ಹರಿಯುತ್ತಿದೆ.
ಕೃತಕ‌ ನೆರೆಯಿಂದಾಗಿ ಉಡುಪಿ ಕಲ್ಸಂಕ ಮಣಿಪಾಲ, ಗುಂಡಿಬೈಲು, ಮಲ್ಪೆ ರಸ್ತೆಗಳ ಸಂಚಾರ ಬಂದ್ ಆಗಿದೆ. ಅಂಬಲಪಾಡಿ, ಮಠದ ಬೆಟ್ಟು, ಗುಂಡಿಬೈಲು, ಬನ್ನಂಜೆ,‌ಕಾಪು ಸೇರಿದಂತೆ ಹಲವು ಭಾಗದಲ್ಲಿ ನೆರೆ ಹಾವಳಿ‌ ತೀವ್ರವಾಗಿದ್ದು, ಇಲ್ಲಿವರೆಗೆ 50 ಕುಟುಂಬಗಳನ್ನು ರಕ್ಷಣೆ ಮಾಡಲಾಗಿದೆ . ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ನಗರ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ.

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...