ಮೃತ ರಾಧಾಕೃಷ್ಣರಿಗೆ ಬಂಟ್ವಾಳ ತಹಶೀಲ್ದಾರ್ ಕಛೇರಿ ಸಿಬ್ಬಂದಿಗಳಿಂದ ಶ್ರದ್ಧಾಂಜಲಿ

ಬಂಟ್ವಾಳ, ಸೆ. 21, 2020 (ವಿಶ್ವಕನ್ನಡಿಗ ನ್ಯೂಸ್) : ಬಂಟ್ವಾಳ ತಾಲೂಕು ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಳೆದ ಶನಿವಾರ (ಸೆ. 19) ನಿಧನರಾದ ರಾಧಾಕೃಷ್ಣ ಅವರಿಗೆ ಬಂಟ್ವಾಳ ತಾಲೂಕು ಕಛೇರಿ ಸಿಬ್ಬಂದಿಗಳು ಮೌನ ಪ್ರಾರ್ಥನೆ ಮತ್ತು ಪುಷ್ಪ ನಮನದೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್ ಬೇರೆ ಬೇರೆ ತಾಲೂಕಿನಲ್ಲಿ
ನಿಷ್ಠಾವಂತರಾಗಿ ಕರ್ತವ್ಯ ಸಲ್ಲಿಸಿ ಬಳಿಕ ಬಂಟ್ವಾಳದಲ್ಲಿ ಕೇಂದ್ರ ಸ್ಥಾನೀಯ ಶಿರಸ್ತೇದಾರರಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲೇ ನಮ್ಮನ್ನಗಲಿದ ರಾಧಾಕೃಷ್ಣ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಎಲ್ಲರಿಗೂ ನೀಡಲಿ ಎಂದು ಪ್ರಾರ್ಥಿಸಿದರು.
ಬಂಟ್ವಾಳ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಮಾತನಾಡಿ ನೌಕರ ಸ್ನೇಹಿಯಾಗಿ ಸರಳತೆಯಿಂದ ಕರ್ತವ್ಯ ನಿರ್ವಹಿಸಿದ ರಾಧಾಕೃಷ್ಣ ಅವರ ಅಗಲಿಕೆ ಸಮಾಜಕ್ಕೆ ತುಂಬಲಾಗದ ನಷ್ಟ ಂದರು.
ಈ ಸಂದರ್ಭ ತಾಲೂಕು ಕಛೇರಿ ಸಿಬ್ಬಂದಿಗಳು, ತಾಲೂಕು ಕಛೇರಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮಕರಣಿಕರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರ್ವಹಿಸಿದರು.

ಪ್ರಧಾನ ವರದಿಗಾರರು,
ವಿಶ್ವ ಕನ್ನಡಿಗ ನ್ಯೂಸ್

    Leave Your Comment

    Your email address will not be published.*

    Open chat
    1
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...