ಉಡುಪಿ: ಹಥ್ರಾಸ್ ನಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಖಂಡಿಸಿ ಎಸ್ ಐ ಓ – ಜಿಐಓ ಪ್ರತಿಭಟನೆ

ಉಡುಪಿ(ವಿಶ್ವಕನ್ನಡಿಗ ನ್ಯೂಸ್): ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆಯನ್ನು ಖಂಡಿಸಿ ಇಂದು ನಗರದ ಹುತಾತ್ಮ ಸ್ಮಾರಕದ ಬಳಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಉಡುಪಿ ಜಿಲ್ಲೆ, ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಉಡುಪಿ ಜಿಲ್ಲೆ ಮತ್ತು ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಮಹಿಳಾ ವಿಭಾಗದ ವತಿಯಿಂದ ಜಂಟಿಯಾಗಿ ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ವಿರೋನಿಕಾ ಕರ್ನೋಲಿಯಾ, ಎಸ್ ಐ ಓ ರಾಜ್ಯ ಕಾರ್ಯದರ್ಶಿ ಆಶೀಮ್ ಜವಾದ್, ಜಿಐಓ ರಾಜ್ಯಾಧ್ಯಕ್ಷೆ ಹುಮೈರಾ ಬಾನು, ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ಜಿಲ್ಲಾ ಸಂಚಾಲಕಿ ಕುಲ್ಸುಮ್ ಅಬುಬಕರ್ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಬದಲ್ಲಿ ಎಸ್ ಐ ಓ ಜಿಲ್ಲಾಧ್ಯಕ್ಷ ನಾಸಿರ್ ಹೂಡೆ, ಜಿಐಓ ಜಿಲ್ಲಾಧ್ಯಕ್ಷೆ ಆಮ್ನ ಕೌಸರ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಅಜೀಜ್ ಉದ್ಯಾವರ್ ಉಪಸ್ಥಿತರಿದ್ದರು. ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಮಹಿಳಾ ವಿಭಾಗದ ಸಂಚಾಲಕಿ ಶಾಹಿದಾ ರಿಯಾಝ್ ನಿರೂಪಿಸಿ ಧನ್ಯವಾದವಿತ್ತರು.

    Leave Your Comment

    Your email address will not be published.*

    Open chat
    1
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...