ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ರಾಜ್ಯ ಬಿಜೆಪಿ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ ರಮಾನಾಥ ರೈ ನಿರ್ದೇಶನದಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ 39 ಗ್ರಾಮ ಪಂಚಾಯತ್ ಕಛೇರಿ ಮುಂಭಾಗ ಅ. 13 ರಂದು ಮಂಗಳವಾರ ಬೆಳಿಗ್ಗೆ ಗಂಟೆ 10.30 ಕ್ಕೆ ಏಕಕಾಲದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಾಮೂಹಿಕ ಪ್ರತಿಭಟನೆ ನಡೆಯಲಿದೆ.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸರಕಾರದ ಸವಲತ್ತುಗಳಿಂದ ವಂಚಿತರಾದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸುವಂತೆ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.