ಚಿಕ್ಕಬಳ್ಳಾಪುರ ನಗರವನ್ನು ಸ್ಮಾರ್ಟ್ ಸಿಟಿ ಮಾಡಲು ಸಹಕರಿಸಿ.: ಆನಂದ್‍ರೆಡ್ಡಿ

ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ದಿಗೊಳಿಸುವ ಮೂಲಕ ನಗರವನ್ನು ಸ್ಮಾರ್ಟ್‍ಸಿಟಿ ಮಾಡಲು ಸಹಕರಿಸಬೇಕೆಂದು ನಗರಸಭೆಯ ನೂತನ ಅಧ್ಯಕ್ಷ ಡಿ.ಎಸ್.ಆನಂದ್‍ರೆಡ್ಡಿ ತಿಳಿಸಿದರು.

ನಗರಸಭೆಯ ಸಭಾಂಗಣದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಭೆಯನ್ನು ನಡೆಸಿ ಮಾತನಾಡಿದ ಅವರು ಚಿಕ್ಕಬಳ್ಳಾಪುರ ನಗರಸಭೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರಥಮ ಆದ್ಯತೆಯನ್ನು ನಾಗರೀಕರಿಂದ ದೂರುಗಳು ಬರದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.

ರಾಜ್ಯದಲ್ಲಿ ಸ್ವಚ್ಚ ಸವೇಕ್ಷಣ್ ಅಭಿಯಾನದಲ್ಲಿ ಚಿಕ್ಕಬಳ್ಳಾಪುರ ನಗರವು 9 ನೇ ಸ್ಥಾನದಲ್ಲಿದ್ದು ನಗರಸಭೆಯ ವ್ಯಾಪ್ತಿಯಲ್ಲಿ ಕಸ ಕಡ್ಡಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ನಗರವನ್ನು ಸ್ವಚ್ಚವಾಗಿಟ್ಟುಕೊಂಡು ಮುಂದಿನ ದಿನಗಳಲ್ಲಿ ನಗರವನ್ನು ಸ್ವಚ್ಚ ಸರ್ವೇಕ್ಷಣ್‍ದಲ್ಲಿ ಪ್ರಥಮ ಸ್ಥಾನಕ್ಕೆ ತರಲು ಅಧಿಕಾರಿಗಳು ಶ್ರಮಿಸಬೇಕೆಂದರು.

ನಗರಸಭೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ನೇರವಾಗಿ ತಮ್ಮ ಗಮನಕ್ಕೆ ತರಬೇಕೆಂದು ಸಲಹೆ ನೀಡಿ ನಗರವನ್ನು ಮಾದರಿ ಮಾಡುವ ನಿಟ್ಟಿನಲ್ಲಿ ತನ್ನೊಂದಿಗೆ ಎಲ್ಲರೂ ಸಹಕರಿಸಿ ಕೈಜೋಡಿಸಬೇಕೆಂದರು.

ಸಭೆಯಲ್ಲಿ ಪೌರಾಯುಕ್ತ ಡಿ.ಲೋಹಿತ್ ಹಾಗೂ ನಗರಸಭೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ: ತೆಮೀಂ.ಪಾಷ

ವರದಿಗಾರರು,
ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...