ಜೆದ್ದಾ(www.vknews.in): ಸೌದಿ ಅರೇಬಿಯಾದಲ್ಲಿ ಕರೋನವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಸಾದ್ಯತೆಯಿದೆ ಈ ಕುರಿತು ಜನತೆ ಜಾಗರೂಕರಾಗಿರಬೇಕು ಎಂದು ಸೌದಿ ಆರೋಗ್ಯ ಮುಖ್ಯಸ್ಥರು ಸೋಮವಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು.
ಪ್ರಪಂಚದಾದ್ಯಂತ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದು, ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗಳು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳ ಬಗ್ಗೆ ಜನರು ಎಚ್ಚರ ವಹಿಸುವುದು ಅನಿವಾರ್ಯವಾಗಿದೆ. ವಿಶ್ವದ ಹೆಚ್ಚಿನ ದೇಶಗಳಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚಾಗಲಾರಂಭಿಸಿದ್ದು, ಯುಎಸ್, ಇಂಗ್ಲೆಂಡ್, ಫ್ರಾನ್ಸ್, ಇಟಲಿ ಮತ್ತು ಸ್ಪೇನ್ನಲ್ಲಿ ಊಹಿಸಲಾರದಷ್ಟು ಸಂಖ್ಯೆಯನ್ನು ತಲುಪಿದೆ. ಸೌದಿ ಅರೇಬಿಯಾದಲ್ಲಿ ಹವಾಮಾನವು ಬದಲಾಗುತ್ತಿದ್ದು, ಪ್ರಸಕ್ತ ಚಳಿಗಾಳಿಯು ವೈರಸ್ ಗೆ ವರದಾನವಾಗುವ ಸಾಧ್ಯತೆಯಿದೆ ಎಂದು ಸಾರ್ವಜನಿಕ ಆರೋಗ್ಯ ಸಚಿವಾಲಯದ ಉಪಕಾರ್ಯದರ್ಶಿ ಡಾ. ಹನಿ ಜೌಖಾದರ್ ಎಚ್ಚರಿಸಿದ್ದಾರೆ.
ಅನೇಕ ದೇಶಗಳಲ್ಲಿ ವೈರಸ್ ನ ಎರಡನೇ ಘಟ್ಟದ ನಿರ್ಬಂಧಗಳನ್ನು ಸಡಿಲಿಸಿದ ನಂತರ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ವಿಫಲರಾಗಿದ್ದು, ಸೌದಿ ಅರೇಬಿಯಾದಲ್ಲಿ, ಹವಾಮಾನವು ಬದಲಾಗುತ್ತಿರುವುದರಿಂದ ಪ್ರಕರಣಗಳ ಹೆಚ್ಚಳವನ್ನು ನಾವು ನಿರೀಕ್ಷಿಸುತ್ತೇವೆ. ಸಾರ್ವಜನಿಕ ಸ್ಥಳಗಳಲ್ಲಿ ಜನರು ಮುಖವಾಡ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಲು ವಿಫಲರಾಗಿರುವುದು ಸಚಿವಾಲಯದ ಗಮನಕ್ಕೆ ಬಂದಿರುತ್ತದೆ ಎಂದು ಅವರು ಹೇಳಿದರು. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಲಾಕ್ ಡೌನ್ ಅನಿವಾರ್ಯವಾಗಬಹುದು ಎಂದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.