ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ಜಿಲ್ಲೆಯ ಏನಿಗದಲೆ ಜವಾಹರ ನವೋದಯ ವಿದ್ಯಾಲಯದಲ್ಲಿ 2021-22ನೇ ಸಾಲಿಗೆ 6ನೇ ತರಗತಿ ಪ್ರವೇಶ ಪಡೆಯಲು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ, ದಿನಾಂಕ 01/05/2008 ರಿಂದ 30/04/2012 ರೊಳಗೆ ಜನಿಸಿರುವ ವಿದ್ಯಾರ್ಥಿಗಳು ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಅಧಿಕೃತ ವೆಬ್ www.navodaya.gov.in ಅಥವಾ www.jnvchikkaballapur.org ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪರೀಕ್ಷೆ 2021 ರ ಏಪ್ರಿಲ್ 10 ರಂದು ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 11:30 ರಿಂದ 1:30 ರವರೆಗೆ ನಡೆಯಲಿದೆ. ಮಾಹಿತಿಗಾಗಿ 08154298999 ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಏನಿಗದಲೆ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಟಿ.ಅನುರಾಧ ತಿಳಿಸಿದ್ದಾರೆ.
ವರದಿ: ತೆ.ಮೀಂ.ಪಾಷ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.