ಮಂಗಳೂರು (ವಿಶ್ವಕನ್ನಡಿಗ ನ್ಯೂಸ್) : ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ನವೆಂಬರ್ 18 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು-ಬಲ್ಮಠದ ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ನಡೆಯಲಿದೆ. ಅದೇ ದಿನ ಮಧ್ಯಾಹ್ನ 3 ಗಂಟೆಗೆ ಪಿಂಚಣಿದಾರರ ಅದಾಲತ್ ಕೂಡ ನಡೆಯಲಿದೆ.
ಈ ಅದಾಲತ್ನಲ್ಲಿ ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ರೀತಿಯ ಸಾರ್ವಜನಿಕ ಕುಂದು-ಕೊರತೆಗಳನ್ನು, ತಕರಾರುಗಳನ್ನು ಪರಿಶೀಲಿಸಲಾಗುವುದು. ಹಾಗೆಯೇ ಪಿಂಚಣಿದಾರರ ಅದಾಲತ್ತಿನಲ್ಲಿ ಪಿಂಚಣಿಗೆ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಲಾಗುವುದು. ಸಾರ್ವಜನಿಕರು ಇದಕ್ಕೆ ಸಂಬಂಧಪಟ್ಟ ದೂರುಗಳನ್ನು ಪತ್ರ ಮುಖೇನ “ಅಂಚೆ ಅದಾಲತ್/ ಪಿಂಚಣಿದಾರರ ಅದಾಲತ್” ತಲೆಬರಹದಡಿ ನವೆಂಬರ್ 17ರೊಳಗೆ “ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಬಲ್ಮಠ, ಮಂಗಳೂರು-575002” ವಿಳಾಸಕ್ಕೆ ಅಥವಾ ದೂರುಗಳನ್ನು ವಾಟ್ಸಾಪ್ ಸಂಖ್ಯೆ 9448291072 ಗೆ ಕಳುಹಿಸಬಹುದು. ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಮಾತ್ರ ಕಳುಹಿಸುವಂತೆ ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗದ ಕಛೇರಿಯ ಪ್ರಕಟಣೆ ತಿಳಿಸಿದೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.