ವೆನ್ಜ್ ಅಬ್ದುಲ್ಲ ಮೇಲೆ ತಲವಾರು ದಾಳಿ:ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ತೀವ್ರ ಖಂಡನೆ

ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ತಾಲೂಕು ಸಮಿತಿಯ ನೂತನ ಕಾರ್ಯದರ್ಶಿಯಾಗಿ ಇತ್ತೀಚೆಗೆ ಆಯ್ಕೆಯಾದ ,ಎಸ್.ವೈ.ಎಸ್ ದಕ್ಷಿಣ ಕನ್ನಡ ಜಿಲ್ಲಾ ಸದಸ್ಯರೂ, ಹಲವಾರು ‌ಸಾಮಾಜಿಕ ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವೆನ್ಜ್ ಅಬ್ದುಲ್ಲ ಅವರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದು, ಘಟನೆಯನ್ನು ಎಸ್ಸೆಸ್ಸೆಫ್ ದ.ಕ‌ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.

ಮೇಘ ಹಾಲ್ ನಲ್ಲಿ ನಡೆದ ಎಸ್.ವೈ.ಎಸ್ COUNT 20 ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಹಿಂದಿರುಗುವ ನಡುವೆ ಅವರು ಕಂದಾವರ ಮಸೀದಿಯಲ್ಲಿ ನಮಾಝ್ ಮುಗಿಸಿ ತನ್ನ ಕಾರಿನ ಬಳಿ ಬರುತ್ತಿದ್ದಾಗ ಹೊಂಚು ಹಾಕಿ‌ಕುಳಿತಿದ್ದ ದುಷ್ಕರ್ಮಿಗಳ ತಂಡ ಅವರ ಮೇಲೆ ತಲವಾರು ದಾಳಿ ಮಾಡಿದೆ. ಅವರ ಪರಿಸ್ಥಿತಿ ಚಿಂತಜನಕವಾಗಿದೆ. ಈ ಕೃತ್ಯದ ಹಿಂದೆ ಇರುವ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಬೇಕು. ಘಟನೆಗೆ ಕಾರಣ ಏನೆಂಬುದನ್ನು ಕೂಲಂಕಷವಾಗಿ ತನಿಖೆ ನಡೆಸಿ ಸತ್ಯ ವಿಚಾರ ಹೊರತೆಗೆಯಬೇಕು ಎಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯನ್ನು ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...