ಬೆಂಗಳೂರು(ವಿಶ್ವ ಕನ್ನಡಿಗ ನ್ಯೂಸ್ ):ಪೋಲಿಸ್ ಇಲಾಖೆಯ ಅತ್ಯುತ್ತಮ ಸೇವೆಗಾಗಿ ರಾಜ್ಯ ಸರಕಾರ ಕೊಡಮಾಡುವ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿರುವ ಬೆಂಗಳೂರಿನ ವಿವೇಕನಗರ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ರಫೀಕ್ ಕೆ.ಎಂ.ರವರನ್ನು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿಯವರ ನೇತೃತ್ವದಲ್ಲಿ ಜಮಾಅತ್ ನಿಯೋಗವು ಭೇಟಿಯಾಗಿ ಅಭಿನಂದನೆಗಳನ್ನು ಸಲ್ಲಿಸಿ ಸನ್ಮಾನಿಸಿದರು.
ನಿಯೋಗದಲ್ಲಿ ಸಹಾಯಕ ಕಾರ್ಯದರ್ಶಿ ರಿಯಾಝ್ ಅಹ್ಮದ್, ಇಸ್ಲಾಮೀ ಮಾಹಿತಿ ಕೇಂದ್ರದ ಮುಹಮ್ಮದ್ ನವಾಝ್, ಸಾಲಿಡಾರಿಟಿ ಯೂತ್ ಮೂವ್ ಮೆಂಟ್ ನ ರಿಹಾನ್ ಉಡುಪಿ, ಮಾಧ್ಯಮ ಸಂಯೋಜಕ ಸಲ್ಮಾನ್ ಬೀದರ್ ಇದ್ದರು.