ಮಡಿಕೇರಿ(www.vknews.in): ಎಸ್ ಕೆ ಎಸ್ ಎಸ್ ಎಫ್ ಜಿಸಿಸಿ ಕೊಡಗು ವತಿಯಿಂದ “ಸ್ವಾತಂತ್ರ್ಯ ಸರ್ವರಿಗೂ ಸಮಾನವಾಗಿರಲಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ಆನ್ಲೈನ್ ಕಾರ್ಯಕ್ರಮದ ಮೂಲಕ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಎಸ್ ಕೆ ಎಸ್ ಎಸ್ ಎಫ್ ಕೊಡಗು ಜಿಲ್ಲಾಧ್ಯಕ್ಷರಾದ ತಮ್ಲೀಕ್ ದಾರಿಮಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಕೇಂದ್ರಬಿಂದು, ಮುಖ್ಯ ಭಾಷಣಕಾರರಾಗಿ ಟ್ರೆಂಡ್ ಕೇಂದ್ರ ಸಮಿತಿ ಸದಸ್ಯರು ಹಾಗೂ SKSSF ದ.ಕ ಜಿಲ್ಲಾ ಕಾರ್ಯದರ್ಶಿಯಾದ ಕೆ.ಎಂ ಇಕ್ಬಾಲ್ ಬಾಳಿಲ ಸ್ವಾತಂತ್ರ್ಯ ದಿನದ ಸಂದೇಶ ಭಾಷಣವನ್ನು ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಜಿಸಿಸಿ ಕೊಡಗು ಅಧ್ಯಕ್ಷರಾದ ಹುಸೈನ್ ಫೈಝಿ ವಹಿಸಲಿದ್ದಾರೆ.ಝೂಮ್ ಆನ್ಲೈನ್ ನಲ್ಲಿ ID: 419 110 6115 ಹಾಗೂ Passcode: SKSSF2021 ಬಳಸಿ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.