ಬೀಜಿಂಗ್ (ವಿಶ್ವ ಕನ್ನಡಿಗ ನ್ಯೂಸ್) : ವಿಶ್ವದಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಚೀನಾದಲ್ಲಿ ಮಕ್ಕಳ ಜನನ ಪ್ರಮಾಣದಲ್ಲಿ ಕ್ಷೀಣತೆ ಕಂಡು ಬಂದ ಕಾರಣ ಸರಕಾರವು ಎರಡು ಮಕ್ಕಳ ನೀತಿಯನ್ನು ಸಡಿಲಗೊಳಿಸಿ, ಎಲ್ಲಾ ದಂಪತಿಗಳು ಮೂರು ಮಕ್ಕಳನ್ನು ಹೊಂದಲು ಅವಕಾಶ ನೀಡಿದೆ.
ಹೆಚ್ಚುತ್ತಿರುವ ವೆಚ್ಚಗಳಿಂದಾಗಿ ಹೆಚ್ಚಿನ ಮಕ್ಕಳನ್ನು ಹೊಂದಲು ಚೀನಾ ದಂಪತಿಗಳ ಹಿಂಜರಿಕೆಯನ್ನು ಹೋಗಲಾಡಿಸಲು ಹಾಗೂ ಹೆಚ್ಚಿನ ಸಾಮಾಜಿಕ ಮತ್ತು ಆರ್ಥಿಕ ಭದ್ರತಾ ಕ್ರಮಗಳೊಂದಿಗೆ ಅವರ ಕಾಳಜಿಗಳನ್ನು ಪರಿಹರಿಸುವ ಉದ್ದೇಶದೊಂದಿಗೆ ತಿದ್ದುಪಡಿ ಕಾನೂನನ್ನು ಅಂಗೀಕರಿಸಲಾಗಿದೆ.
ಮಕ್ಕಳ ಬೆಳವಣಿಗೆ, ಅವರಿಗೆ ಶಿಕ್ಷಣ ವೆಚ್ಚ, ಹಣಕಾಸು, ತೆರಿಗೆಗಳು, ವಿಮೆ, ಶಿಕ್ಷಣ, ವಸತಿ ಮತ್ತು ಉದ್ಯೋಗ ಸೇರಿದಂತೆ ಕುಟುಂಬಗಳ ಹೊರೆ ಕಡಿಮೆ ಮಾಡಲು ಬೆಂಬಲದ ಕ್ರಮಗಳಿಗೆ ಹೊಸ ಕಾನೂನಿನಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಅಲ್ಲಿನ ಪತ್ರಿಕೆಯೊಂದು ವರದಿ ಮಾಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.