ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಚಿತ್ರನಟ ಪವನ್ ಕಲ್ಯಾಣ ಹುಟ್ಟು ಹಬ್ಬದ ಅಂಗವಾಗಿ ಸ್ಪೂರ್ತಿದಾಯಕ ರಕ್ತದಾನಿಗಳ ಸಂಸ್ಥೆ ವತಿಯಿಂದ ಸೆ.02 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಶಿಡ್ಲಘಟ್ಟ ನಗರದ ಸಾರ್ವಜನಿಕ ಆಸ್ಪತ್ರೆ ಬಳಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಶಶಿಕುಮಾರ್,ಕಾರ್ಯದರ್ಶಿ ಎನ್.ಶ್ರೀನಿವಾಸ್ ಹಾಗೂ ಖಜಾಂಚಿ ಸುಭ್ರಮಣಿ ತಿಳಿಸಿದ್ದಾರೆ.
ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಕೊರೊನಾ ಸೋಂಕಿನ ಪ್ರಭಾವದಿಂದ ಅನೇಕ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಇಂತಹ ಸಂದರ್ಭದಲ್ಲಿ ಬಡ ರೋಗಿಗಳು,ಗರ್ಭಿಣಿಯರು ಮತ್ತು ಮಕ್ಕಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು ಈ ಶಿಬಿರದಲ್ಲಿ ಚಿತ್ರನಟ ಪವನ್ ಕಲ್ಯಾಣ ಅಭಿಮಾನಿಗಳು ಮತ್ತು ನಾಗರಿಕರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.