ಬೆಳ್ತಂಗಡಿ (www.vknews.com): ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಡೆಸಿದ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ರವರು ಎನ್.ಇ.ಪಿ ಯಲ್ಲಿ ಲೋಪದೋಷಗಳಿದ್ದರೆ ಚರ್ಚೆಗೆ ಬನ್ನಿ ಎಂದು ಆಹ್ವಾನಿಸಿದ ಸವಾಲನ್ನು ಸ್ವೀಕರಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿಗಳು ನಾವು ಚರ್ಚೆಗೆ ತಯಾರಾಗಿದ್ದೇವೆ!! ನೀವು ತಯಾರಾಗಿದ್ದೀರಾ?? ಎಂಬ ಭಿತ್ತಿಪತ್ರ ಪ್ರದರ್ಶನ ಮಾಡುವ ಮುಖಾಂತರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ವಿರುಧ್ದ ಪ್ರತಿಭಟಿಸಿದರು.
ಖಾಸಗೀಕರಣ, ಕೇಂದ್ರೀಕರಣ ಹಾಗೂ ಕೇಸರೀಕರಣಕ್ಕೆ ಒತ್ತನ್ನು ನೀಡುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಒಪ್ಪಲು ಸಾಧ್ಯವಿಲ್ಲ ಈ ಬಗ್ಗೆ ಇರುವ ಚರ್ಚೆಗೆ ಮುಕ್ತವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಿದ್ದವಿದೆ, ಉನ್ನತ ಶಿಕ್ಷಣ ಸಚಿವರು ತಯಾರಾಗಿದ್ದೀರಾ? ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಯಾಸೀನ್ ಬಂಗೇರಕಟ್ಟೆ ಹೇಳಿದರು.
ಬೆಳ್ತಂಗಡಿ ತಾಲೂಕಿನ ಬಂಗೇರಕಟ್ಟೆ, ಪಾಂಡವರಕಲ್ಲು, ಮದ್ದಡ್ಕ, ಸುನ್ನತ್ಕೆರೆ, ಪಡಂಗಡಿ, ಕಾವಳಕಟ್ಟೆ, ಉಜಿರೆ, ಕುಂಟಿನಿ ಮುಂತಾದ ಸ್ಥಳಗಳಲ್ಲಿ ಭಿತ್ತಿಪತ್ರ ಪ್ರದರ್ಶನ ಮಾಡಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಶಹೀರ್, ಕೋಶಾಧಿಕಾರಿ ಝಾಹೀದ್, ಜಿಲ್ಲಾ ಸಮಿತಿ ಸದಸ್ಯರಾದ ಸಹಝಾದ್ , ಸಿನಾನ್, ಹಾಗೂ ಏರಿಯಾ ಮತ್ತು ಯೂನಿಟ್ ನಾಯಕರು ಉಪಸ್ಥಿತರಿದ್ದರು..
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.