ಶ್ರೀನಿವಾಸಪುರ (ವಿಶ್ವ ಕನ್ನಡಿಗ ನ್ಯೂಸ್):-ತಾಲ್ಲೂಕಿನ ತಾಡಿಗೋಲ್ ಕ್ಲಾಸ್ನಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರನ್ನು ಥಳಿಸಿರುವ ಪುಂಡ ಪೋಕರಿಗಳ ವಿರುದ್ಧ ಪೊಲೀಡರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಆಗ್ರಹಪಡಿಸಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಈಚೆಗೆ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಸಮೀಪ ನಡೆದ ಘರ್ಷಣೆಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರು ಹಾಗೂ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿ ಮಾತನಾಡಿದರು.
ಈ ಘಟನೆಯಲ್ಲಿ ಹಲ್ಲೆಗೆ ಒಳಗಾಗಿರುವ ವಿದ್ಯಾರ್ಥಿನಿಯರನ್ನು ಕೇಸ್ನಲ್ಲಿ ಸೇರಿಸಿರುವುದು ದುರದೃಷ್ಟಕರ. ಇದು ಅವರನ್ನು ಹೆದರಿಸಿ , ಮೊಕದ್ದಮೆ ವಾಪಸ್ ಪಡೆಯುವಂತೆ ಮಾಡಲು ಮಾಡಲಾಗಿದೆ. ಪೊಲೀಸರು ಅಮಾಯಕ ಹೆಣ್ಣು ಮಕ್ಕಳನ್ನು ಕೇಸ್ನಲ್ಲಿ ಸೇರಿಸಿ ಮಾನಸಿಕ ಹಿಂಸೆ ನೀಡುವುದು ಸರಿಯಲ್ಲ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಸುವವರಿಗೆ ತೆಲಂಗಾಣ ಪೊಲೀಸರು ಸರಿಯಾಗಿ ಬುದ್ಧಿ ಕಲಿಸಿದ್ದಾರೆ.
ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಅಂಥ ಧೈರ್ಯ ಪ್ರದರ್ಶಿಸಬೇಕಾಗಿದೆ ಎಂದು ಹೇಳಿದರು. ವಿಳಾಸ ಗೊತ್ತಿದೆ , ಹಲ್ಲೆ ನಡೆಸಿರುವುದು ವೀಡಿಯೋದಲ್ಲಿ ದಾಖಲಾಗಿದೆ ಹೀಗಿದ್ದೂ , ಅವರನ್ನು ಹಿಡಿಯದಿರುವುದು ಸಂಶಯಕ್ಕೆ ಎಡೆಮಾಡಿಕೊಡುತ್ತದೆ . ಆದ್ದರಿಂದ ಎರಡು ದಿನಗಳ ಒಳಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ , ಡಿವೈಎಸ್ಪಿ ಕೆ.ಸಿ.ಗಿರಿ , ತಾಲ್ಲೂಕು ವೈದ್ಯಾಧಿಕಾರಿ ಡಾ . ಎಂ.ಸಿ.ವಿಜಯ , ಆಸ್ಪತ್ರೆ ಆಡಳಿತಾಧಿಕಾರಿ ಡಿ . ಶ್ರೀನಿವಾಸ್ , ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ. ಶ್ರೀನಿವಾಸನ್ , ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ , ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ವೆಂಕಟೇಶ್ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.